ಬೆಂಗಳೂರು.24.ಏಪ್ರಿಲ್ .25:- ಉನ್ನತ ಶಿಕ್ಷಣ ಇಲಾಖೆ UGC Regulation 2016 ರಲ್ಲಿ ಪಿಹೆಚ್ ಡಿ, ಎಂ ಫಿಲ್ ಪದವಿ ಪಡೆದು, ಬೋಧಕರಾಗಿ ಕರ್ತವ್ಯ ನಿರ್ವಹಿಸುತ್ತಿರುವಂತ ಉಪನ್ಯಾಸಕರಿಗೆ ಶಾಕ್ ನೀಡಿದೆ. 2016ರ ಯುಜಿಸಿ ವೇತನ ಶ್ರೇಣಿಯನ್ವಯ ಮುಂಗಡ ವೇತನ ಬಡ್ತಿ ಮಂಜೂರಾತಿಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊಸ ಸುತ್ತೋಲೆ
ಈ ಮೂಲಕ ಯುಜಿಸಿ ವೇತನ ಶ್ರೇಣಿ ನಿರೀಕ್ಷೆಯಲ್ಲಿದ್ದಂತ 2016ರಲ್ಲಿ ಪಿಹೆಚ್ ಡಿ, ಎಂ.ಫಿಲ್ ಪದವಿ ಪಡೆದು ಬೋಧಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಬಿಗ್ ಶಾಕ್ ನೀಡಿದೆ.
ಈ ಕುರಿತಂತೆ ಕಾಲೇಜು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಸರ್ಕಾರದ ಆದೇಶ ಸಂಖ್ಯೆ:ಇಡಿ/483/ಯುಎನ್‌ಇ/2017, ದಿನಾಂಕ:16-03-2019 ರ ಕಂಡಿಕೆ (14) ಕ್ಕೆ ಸರ್ಕಾರವು ಹೊರಡಿಸಿರುವ ತಿದ್ದುಪಡಿ ಆದೇಶದ ಪ್ರತಿಯನ್ನು ಈ ಸುತ್ತೋಲೆಯೊಂದಿಗೆ ಲಗತ್ತಿಸಲಾಗಿದೆ ಎಂದು ತಿಳಿಸಿದೆ.
ಸದರಿ ತಿದ್ದುಪಡಿಯನ್ವಯ ದಿನಾಂಕ:01.01.2016 ರ ನಂತರ ಪಡೆದ ಪಿ.ಹೆಚ್.ಡಿ/ಎಂ.ಫಿಲ್ ಪದವಿಗಳಿಗೆ ಮುಂಗಡ ವೇತನ ಬಡ್ತಿಗಳನ್ನು ಮಂಜೂರು ಮಾಡಲು ಅವಕಾಶವಿಲ್ಲದ ಕಾರಣ ಈ ಸಂಬಂಧ ಯಾವುದೇ ಪ್ರಸ್ತಾವನೆಗಳನ್ನು ಕೇಂದ್ರ ಕಛೇರಿಗೆ ಸಲ್ಲಿಸದಿರುವಂತೆ ಸೂಚಿಸಲಾಗಿದೆ. ಮುಂದುವರೆದಂತೆ ಈಗಾಗಲೇ ಈ ಕಛೇರಿಯಲ್ಲಿ ಸ್ವೀಕೃತವಾಗಿರುವ ಪ್ರಸ್ತಾವನೆಗಳನ್ನು ತಿರಸ್ಕರಿಸಲಾಗಿದೆ ಎಂಬುದಾಗಿ ತಿಳಿಸಿ, ಬಿಗ್ ಶಾಕ್ ನೀಡಿದೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…