ನಿರಂತರವಾಗಿ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು!ಬಿ ಎಸ್ ಪಿ ರಾಜ್ಯ ಕಾರ್ಯದರ್ಶಿ ಜ್ಞಾನೇಶ್ವರ ಸಿಂಗಾರೆ
14 ಡಿಸೆಂಬರ್ 24 ಬೀದರ್ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ನಿರಂತರವಾಗಿ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ದಲಿತರ ಮೇಲಿನ ದೌರ್ಜನ್ಯವನ್ನು ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಜಿಲ್ಲಾಡಳಿತವು ಜಿಲ್ಲಾ ಉಸ್ತುವಾರಿ ಸಚಿವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಫೆಬ್ರುವರಿ 9ರಂದು ಭಾಲ್ಕಿ ತಾಲೂಕಿನ ಮಳಚಾಪೂರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಕೆಲವು ಕಿಡಿಗೇಡಿಗಳು ಅಡ್ಡಿಯುಂಟು ಮಾಡಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು. ಇದುವರೆಗೆ ಅವರನ್ನು ಬಂಧಿಸಿಲ್ಲ ಎಂದು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು….