2025 ನೇ ಸಾಲಿಗೆ ಕಾಲೇಜು ಶಿಕ್ಷಣ ಇಲಾಖೆಯ ಬೋಧಕರ ವರ್ಗಾವಣೆ.!

2025 ನೇ ಸಾಲಿಗೆ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸಿಲಿಂಗ್ ನಡೆಸುವ ಬಗ್ಗೆ.

ಉಲ್ಲೇಖ: 1. ಸರ್ಕಾರದ ಅಧಿಸೂಚನೆ ಸಂಖ್ಯೆ: ಇಡಿ 151 ಡಿಸಿಇ 2020 ದಿನಾಂಕ:29.01.2021 ರಂತೆ ಅಧಿಸೂಚಿಸಲಾದ ಕಾಲೇಜು ಶಿಕ್ಷಣ ಇಲಾಖೆಯ ಬೋಧಕರ ವರ್ಗಾವಣೆ ನಿಯಮಗಳು- ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಬೋಧಕರ (ಪ್ರಾಧ್ಯಾಪಕರು, ಸಹ/ ಸಹಾಯಕ ಪ್ರಾಧ್ಯಾಪಕರು, ಗ್ರಂಥಪಾಲಕರು ಮತ್ತು ಕ್ರೀಡಾ & ದೈಹಿಕ ಶಿಕ್ಷಣ ನಿರ್ದೇಶಕರು) ವರ್ಗಾವಣೆಗಳನ್ನು ನಿಯಂತ್ರಿಸುವ ಸಲುವಾಗಿ

ಉಲ್ಲೇಖ :

(1) ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆಯ ಬೋಧಕರ ವರ್ಗಾವಣೆ ನಿಯಂತ್ರಣ) ನಿಯಮಗಳು- 2021 ನ್ನು ಹಾಗೂ

ಉಲ್ಲೇಖ :

(2 & 3)ರಲ್ಲಿ ಸದರಿ ನಿಯಮಗಳ ಕೆಲವೊಂದು ಅಂಶಗಳಿಗೆ ತಿದ್ದುಪಡಿಯನ್ನು ಮಾಡಿ ಅಧಿಸೂಚಿಸಲಾಗಿದೆ.

ಸದರಿ ವರ್ಗಾವಣೆ ನಿಯಮಗಳ ನಿಯಮ 8 ರಲ್ಲಿ ಸಾರ್ವಜನಿಕ ಹಿತದೃಷ್ಟಿಯ ಕಡ್ಡಾಯ ವರ್ಗಾವಣೆ ಹಾಗೂ ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆಗಳನ್ನು ಪ್ರತಿ ಕ್ಯಾಲೆಂಡರ್ ವರ್ಷದ ಮೇ ಮತ್ತು ಜುಲೈ ಮಾಹೆಯ ನಡುವೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.

ಮೇಲ್ಕಂಡ ನಿಯಮದನ್ವಯ ಮಂಜೂರಾದ ಬೋಧಕರ ಹುದ್ದೆಗಳ ಶೇಕಡಾ 9 ರಷ್ಟು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗಳು ಹಾಗೂ ಶೇಕಡಾ 6 ರಷ್ಟು ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆ ನಡೆಸಲು ಅವಕಾಶವಿದ್ದು ಅದರಂತೆ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿರುತ್ತದೆ.

ವರ್ಗಾವಣೆ ನಿಯಮಗಳ ನಿಯಮ 4ರ ಉಪನಿಯಮ 3 ಮತ್ತು 4 (ಎ) ರಲ್ಲಿ ಹೇಳಿರುವ ವಿಶೇಷ ಪ್ರಕರಣಗಳಿಗೆ ಅನ್ವಯಿಸುವ ಬೋಧಕರು ಅಗತ್ಯ ದಾಖಲೆಗಳೊಂದಿಗೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯಗೊಳಿಸುವ Online ನಮೂನೆಯಲ್ಲಿ ನಿಗದಿತ ದಿನಾಂಕದ ಒಳಗೆ ವರ್ಗಾವಣೆ ಅರ್ಜಿ ಸಲ್ಲಿಸುವುದು, ನಿಗದಿತ ಕೊನೆಯ ದಿನಾಂಕದ ನಂತರ ಮತ್ತು ಅಗತ್ಯ ದಾಖಲಾತಿಗಳಿಲ್ಲದೆ ಸಲ್ಲಿಸಿದ ವರ್ಗಾವಣೆ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

1 ವೈದ್ಯಕೀಯ ಕಾರಣಗಳಿಗಾಗಿ ವರ್ಗಾವಣೆ ಬಯಸುವ ಬೋಧಕರು ಕಡ್ಡಾಯವಾಗಿ ತಾವು ಕರ್ತವ್ಯನಿರ್ವಹಿಸುತ್ತಿರುವ ಜಿಲ್ಲೆಯ ಜಿಲ್ಲಾ ವೈದ್ಯಕೀಯ ಮಂಡಳಿಯಿಂದ ಪಡೆದ ವೈದ್ಯಕಿಯ ಪ್ರಮಾಣಪತ್ರವನ್ನು ಸಲ್ಲಿಸುವುದು.

ಸಾರ್ವಜನಿಕ ಹಿತಾಸಕ್ತಿಯ ಕಡ್ಡಾಯ ವರ್ಗಾವಣೆಯ ಆದ್ಯತಾ ಪಟ್ಟಿಯಲ್ಲಿ ಇಲ್ಲದಿದ್ದಲ್ಲಿ ಒ ಒಂದೇ ತಾಲ್ಲೂಕಿನಲ್ಲಿ ಕರ್ತವ್ಯನಿರ್ವಹಿಸುತ್ತಿರುವ ದಂಪತಿಗಳು ಪತಿ-ಪತ್ನಿ ವಿಶೇಷ ಪ್ರಕರಣದ ವರ್ಗಾವಣೆಗೆ ಅರ್ಜಿ ಸಲ್ಲಿಸಿದಲ್ಲಿ ಪರಿಗಣಿಸಲಾಗುವುದಿಲ್ಲ.

ವಿಶೇಷ ಪ್ರಕರಣಗಳ ಅಡಿ ಸಲ್ಲಿಸುವ ಕೋರಿಕೆ ವರ್ಗಾವಣೆ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳ ವಿವರಗಳು.

prajaprabhat

Recent Posts

ವಿದ್ಯುತ್ ಕಂಬ ಬಿದ್ದು ಲೈನ್‌ಮ್ಯಾನ್ ಮೃತ ಪ್ರಕರಣ: ಆರೋಪಿಗೆ ಶಿಕ್ಷೆ

ಕೊಪ್ಪಳ.07.ಆಗಸ್ಟ್.25: ಜೆ.ಸಿ.ಬಿ ಕ್ರೆನ್ ಸರಪಳಿ ಜಾರಿ ತೆಲೆ ಮೇಲೆ ಬಿದ್ದಿರುವುದರಿಂದ ಲೈನ್‌ಮ್ಯಾನ್ ಮೃತ ಪಟ್ಟಿರುವ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.…

5 hours ago

ಗೃಹಲಕ್ಷ್ಮೀ 3ನೇ ಕಂತಿನ ಹಣ ಬಿಡುಗಡೆ- ರೆಡ್ಡಿ ಶ್ರೀ ನಿವಾಸ

ಕೊಪ್ಪಳ.07.ಆಗಸ್ಟ್.25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ…

5 hours ago

ಕಮ್ಯುನಿಟಿ ಮೊಬಿಲೈಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು.07.ಆಗಸ್ಟ್.25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ವಾರ್ಡ್ಗಳಲ್ಲಿ 2 ವರ್ಷಗಳ ಅವಧಿಗೆ ಸ್ವಚ್ಛ ಭಾರತ್ ಮಿಷನ್ 2.0ನ ಐಇಸಿ…

5 hours ago

ಡಿ.ದೇವರಾಜು ಅರಸು ಜಯಂತಿ: ಅರ್ಥಪೂರ್ಣ ಆಚರಣೆಗೆ ಸೂಚನೆ

ರಾಯಚೂರು.07.ಆಗಸ್ಟ್.25: ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು…

6 hours ago

ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಕೆಪಿಎಂಇ, ಪಿಸಿಪಿಎನ್‌ಡಿಟಿ ಕಾಯ್ದೆಗಳ ಮಾರ್ಗಸೂಚಿ ಪಾಲನೆಯಾಗಲಿ

ರಾಯಚೂರು.07.ಆಗಸ್ಟ್ .25: ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳು ಕೆಪಿಎಂಇ ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಕೆಪಿಎಂಇ ಕಾಯ್ದೆ…

6 hours ago

ಪವರ್ ಸ್ಟಾರ್ ರಾಯಚೂರಿನಲ್ಲಿ ಸೇನಾ<br>ನೇಮಕಾತಿಯ ಅಗ್ನಿಪರೀಕ್ಷೆ: ಇಂದಿನಿoದ ಆರಂಭ.

ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರ ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ ಶಿಸ್ತಿನ ಸಿಪಾಯಿಗಳ ಶಾಲೆಯಂತಾದ ರಾಯಚೂರಿನ ಕೃಷಿ ವಿಜ್ಞಾನಿಗಳ…

6 hours ago