2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಅರ್ಜ ಆಹ್ವಾನ

ಈ ಮೇಲಿನ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿಯ ಸ್ನಾತಕೋತ್ತರ ಪದವಿಯ ವಿಭಾಗಗಳಲ್ಲಿ ಕಾರ್ಯಭಾರದ ಅಗತ್ಯತೆಗನುಸಾರ ಬೋಧನಾಕಾರ್ಯದ ನಿರ್ವಹಣೆಗಾಗಿ UGC ನಿಯಮಾನುಸಾರ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೊಪ್ಪಳ ವಿಶ್ವವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವಿಭಾಗಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರಗಳಲ್ಲಿನ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


ಸ್ನಾತಕೋತ್ತರ ಅಧ್ಯಯನ ವಿಭಾಗಗಳು

1. ಕನ್ನಡ ಅಧ್ಯಯನ ವಿಭಾಗ

2. ಇಂಗ್ಲಿಷ್ ಅಧ್ಯಯನ ವಿಭಾಗ

3. ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗ

4. ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗ

5. ಅರ್ಥಶಾಸ್ತ್ರ ಅಧ್ಯಯನ ವಿಭಾಗ

6. ರಾಜ್ಯಶಾಸ್ತ್ರ ಅಧ್ಯಯನ ವಿಭಾಗ

7. ಸಮಾಜಶಾಸ್ತ್ರ ಅಧ್ಯಯನ ವಿಭಾಗ

8. ಸಮೂಹ ಮಾಧ್ಯಮ ಮತ್ತು ಪತ್ರಿಕೋದ್ಯಮ ವಿಭಾಗ

9. ರಸಾಯನಶಾಸ್ತ್ರ ಅಧ್ಯಯನ ವಿಭಾಗ

10. ಭೌತಶಾಸ್ತ್ರ ಅಧ್ಯಯನ ವಿಭಾಗ,

ಅಧ್ಯಯನ ವಿಭಾಗ

11. ಗಣಿತಶಾಸ್ತ್ರ ಅಧ್ಯಯ

12. ಭೂಗೋಳಶಾಸ್ತ್ರ ಅಧ್ಯಯನ ವಿಭಾಗ

13. ಸಹಾಯಕ ಗ್ರಂಥಪಾಲಕರು

14. ಸಹಾಯಕ ದೈಹಿಕ ನಿರ್ದೇಶಕರು

15. ಮಹಿಳಾ ಅಧ್ಯಯನ ವಿಭಾಗ

16. ಪ್ರದರ್ಶನ ಕಲೆ ಅಧ್ಯಯನ ವಿಭಾಗ

ಅಭ್ಯರ್ಥಿಗಳಿಗೆ ಸೂಚನೆ:

ಅತಿಥಿ ಉಪನ್ಯಾಸಕರನ್ನು UGC ಹಾಗೂ ಕಾಲಕಾಲಕ್ಕೆ ಹೊರಡಿಸುವ ಸರಕಾರಿ ನಿಯಮಾವಳಿಯ ಪ್ರಕಾರ ತಾತ್ಕಾಲಿಕವಾಗಿ ನೇಮಕ ಮಾಡಲಾಗುವುದು.

ಈ ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿದ್ದು, 2025-26ನೇ ಶೈಕ್ಷಣಿಕ ಸಾಲಿಗೆ ಮಾತ್ರ ಸೀಮಿತವಾಗಿರುತ್ತದೆ ಹಾಗೂ ಯಾವುದೇ ಮಂಜೂರಾದ ಹುದ್ದೆಗಳಿಗೆ ವಿರುದ್ಧವಾಗಿರುವುದಿಲ್ಲ ಮತ್ತು ಸೂಚಿಸಲಾದ ಹುದ್ದೆಗಳ ಸಂಖ್ಯೆಯು ತಾತ್ಕಾಲಿಕವಾಗಿದ್ದು, ಹೆಚ್ಚುವರಿ ಕಾರ್ಯಭಾರಕ್ಕನುಗುಣವಾಗಿ ನೇಮಿಸಿಕೊಳ್ಳಲಾಗುವುದು (Against the workload but not against the sanctioned post).

ಅಧಿಸೂಚನೆಯಲ್ಲಿ ಪ್ರಕಟಿಸಿದ ಹುದ್ದೆಗಳನ್ನು ಭರ್ತಿಮಾಡುವ ಅಥವಾ ಭರ್ತಿ ಮಾಡದೇ ಇರುವ ಅಧಿಕಾರವನ್ನು ವಿಶ್ವವಿದ್ಯಾಲಯವು ಕಾಯ್ದಿರಿಸಿದೆ.

ಆಯ್ಕೆಯಾದ ಅಭ್ಯರ್ಥಿಗಳ ಸೇವೆಯು ತೃಪ್ತಿಕರವಾಗಿರದಿದ್ದಲ್ಲಿ ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ತೆಗೆದುಹಾಕುವ ಅಧಿಕಾರ ವಿಶ್ವವಿದ್ಯಾಲಯ ಹೊಂದಿದೆ.

ಸಂದರ್ಶನಕ್ಕೆ ಹಾಜರಾದ ಮಾತ್ರಕ್ಕೆ ಅಭ್ಯರ್ಥಿಗಳು ನೇಮಕಾತಿಯೆಂದು ಭಾವಿಸತಕ್ಕದ್ದಲ್ಲ.

ಆಯ್ಕೆಯಾದ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಧೀನಕ್ಕೊಳಪಟ್ಟಿರುವ ಯಾವುದೇ ಸ್ನಾತಕೋತ್ತರ ಕೇಂದ್ರಗಳಲ್ಲಿ ಸೇವೆ ಸಲ್ಲಿಸಲು ಸಿದ್ಧವಿರಬೇಕು.

ನಿಗದಿತ ಅರ್ಜಿ ನಮೂನೆಗಳು, ವಿವಿಧ ವಿಭಾಗಗಳ ವಿವರ ಹಾಗೂ ಇನ್ನಿತರೆ ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಅಂತರ್ಜಾಲ www.koppaluniversity.ac.in ನೋಡತಕ್ಕದ್ದು ಹಾಗೂ ಅರ್ಜಿಗಳನ್ನು ಡೌನ್ ಲೋಡ್ ಮಾಡತಕ್ಕದ್ದು

ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿಯಲ್ಲಿನ ಸ್ನಾತಕೋತ್ತರ ಪದವಿಯ ವಿಭಾಗಗಳಿಗೆ ಆಗತ್ಯತೆಗನುಸಾರ ಬೋಧನಾ ಕಾರ್ಯದ ನಿರ್ವಹಣೆಗಾಗಿ ಯು.ಜಿ.ಸಿ ನಿಯಮಾನುಸಾರ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ ಆಸಕ್ತಿಯುಳ್ಳ ಅತಿಥಿ ಉಪನ್ಯಾಸಕರನ್ನು ಪಡೆಯಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಪಡೆಯಲು ಮತ್ತು ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ www.koppaluniversity.ac.in ವನ್ನು ನೋಡಬಹುದಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.

ಭರ್ತಿ ಮಾಡಿದ ಅರ್ಜಿ ನಿಗದಿತ ಶುಲ್ಕ ಮತ್ತು ಲಗತ್ತುಗಳೊಂದಿಗೆ ಶೈಕ್ಷಣಿಕ ಅರ್ಹತೆ, ಅನುಭವದ ವಿವರ, ಜಾತಿ, ವರ್ಗ ಪ್ರಮಾಣ ಪತ್ರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಿದ ಪ್ರತಿಗಳನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು.

ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ. 1,000/- ಹಾಗೂ ಪ.ಜಾ/ಪ.ಪಂ/ಪ್ರವರ್ಗ-01 ಅಭ್ಯರ್ಥಿಗಳಿಗೆ ರೂ. 750/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಸದರಿ ಅಭ್ಯರ್ಥಿಗಳು ತಮ್ಮ ಪ್ರವರ್ಗವಾರು ಮೂಲ ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ಲಗತ್ತಿಸಿದ್ದಲ್ಲಿ ಮಾತ್ರ ಮೀಸಲಾತಿಗೆ ಅರ್ಹರಿರುತ್ತಾರೆ ಹಾಗೂ ಸಂದರ್ಶನದ ವೇಳೆ ಮೂಲ ಜಾತಿ ಪ್ರಮಾಣ ಪತ್ರವನ್ನು ಪರಿಶೀಲಿಸಲಾಗುವುದು.

ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಗದಿತ ಶುಲ್ಕದ ಮೂಲಪ್ರತಿ (Original Copy) ಯನ್ನು ಹಣಕಾಸು ಅಧಿಕಾರಿಗಳು, ಕೊಪ್ಪಳ ವಿಶ್ವವಿದ್ಯಾಲಯ, ಕೊಪ್ಪಳ ಇವರ ಹೆಸರಿನಲ್ಲಿ ಪಡೆದು ಲಗತ್ತಿಸಬೇಕು ಅಥವಾ ವಿಶ್ವವಿದ್ಯಾಲಯದ ಬ್ಯಾಂಕ್ ಆಫ್ : 58540100016705 កំ (IFSC: BRBOKOPPAL) ಅಭ್ಯರ್ಥಿಯ ಪ್ರತಿಯನ್ನು ಲಗತ್ತಿಸತಕ್ಕದ್ದು.

ಸಂದರ್ಶನ ದಿನಾಂಕ ಮತ್ತು ಸಮಯವನ್ನು ಹಾಗೂ ಇದಕ್ಕೆ ಸಂಬಂಧಿಸಿದ ಇನ್ನಿತರ ಮಾಹಿತಿಯನ್ನು E-Mail/Whatsapp ಅಥವಾ ವಿಶ್ವವಿದ್ಯಾಲಯದ ಜಾಲತಾಣದಲ್ಲಿ www.koppaluniversity.ac.in ಪ್ರಕಟಿಸಲಾಗುವುದು, ಅಭ್ಯರ್ಥಿಗಳು ವಿಶ್ವವಿದ್ಯಾಲಯದ ವೆಬ್‌ ಸೈಟ್ ಗಮನಿಸಲು ತಿಳಿಸಲಾಗಿದೆ. ಸಂದರ್ಶನಕ್ಕಾಗಿ ವಿಶ್ವವಿದ್ಯಾಲಯದಿಂದ ಯಾವುದೇ ಭತ್ಯೆಗಳನ್ನು ನೀಡಲಾಗುವುದಿಲ್ಲ.

If the article is published in UGC-Care-list and reputed journals, attach the proof for evidence.

ಮೇಲ್ಕಂಡ ಎಲ್ಲಾ ದಾಖಲೆಗಳನ್ನು ದಿನಾಂಕ: 14ನೇ ಆಗಸ್ಟ್ 2025ರ ಸಂಜೆ 5 ಗಂಟೆ ಒಳಗಾಗಿ ಆಡಳಿತಾಧಿಕಾರಿಗಳು, ಕೊಪ್ಪಳ ವಿಶ್ವವಿದ್ಯಾಲಯ, ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯದ ಆವರಣ 583 238 ಇಲ್ಲಿ ಖುದ್ದಾಗಿ/ರಿಜಿಸ್ಟರ್ ಅಂಚೆ ಮುಖಾಂತರ ಸಲ್ಲಿಸತಕ್ಕದ್ದು.

ಅಂಚೆ ಸೇವೆಯಲ್ಲಿ ವಿಳಂಬವಾದಲ್ಲಿ ವಿಶ್ವವಿದ್ಯಾಲಯವು ಜವಾಬ್ದಾರರಾಗುವುದಿಲ್ಲ.

ಅಪೂರ್ಣವಾದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಆಯ್ಕೆ ಪ್ರಕ್ರಿಯೆಯು ಪ್ರಸ್ತುತ ಜಾರಿಯಿರುವ ಸರಕಾರದ ನಿಯಮಾವಳಿಗಳನ್ವಯ ಅರ್ಹತೆ (ಮೆರಿಟ್) ಹಾಗೂ ಮೀಸಲಾತಿ ಆಧಾರದ ಮೇಲೆ ನೇಮಕಾತಿಗೆ ಪರಿಗಣಿಸಲಾಗುವುದು.

ಸಂದರ್ಶನದ ವೇಳೆಯಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ಎಲ್ಲಾ ಮೂಲ ಪ್ರಮಾಣ ಪತ್ರಗಳನ್ನು ಸಲ್ಲಿಸಲು ಸೂಚಿಸಿದೆ.

ಆಯ್ಕೆಯಾದ ಅಭ್ಯರ್ಥಿಗಳು ವಿಶ್ವವಿದ್ಯಾಳಯವು ನೀಡುವ ಎಲ್ಲಾ ಕೆಲಸಗಳನ್ನು ನಿಷ್ಠೆಯಿಂದ ಪಾಲಿಸುವುದು.

ವಿಶ್ವವಿದ್ಯಾಲಯವು ನಡೆಸುವ ತಾತ್ಕಾಲಿಕ ಉಪನ್ಯಾಸಕರ ನೇಮಕದ ಸಂದರ್ಶನವು ವಿಶ್ವವಿದ್ಯಾಲಯದ ವಿವೇಚನೆಗೆ ಒಳಪಟ್ಟಿರುತ್ತದೆ.

ವಿಶ್ವವಿದ್ಯಾಲಯವು ಬೋಧನಾಕಾರ್ಯದ ಅನುಗುಣವಾಗಿ ವಿಭಾಗವಾರು ಅತಿಥಿ ಉಪನ್ಯಾಸಕರ ಸಂಖ್ಯೆಯನ್ನು ಹೆಚ್ಚು ಮತ್ತು ಕಡಿಮೆ ಮಾಡುವ ಅಧಿಕಾರವನ್ನು ಹೊಂದಿರುತ್ತದೆ.

ಅಭ್ಯರ್ಥಿಗಳು ಕಳೆದ ಮೂರು ವರ್ಷಗಳಿಂದ ಪ್ರಕಟಿಸಿದ ಸಂಶೋಧನಾ ಲೇಖನ (Research Article) ಗಳನ್ನು ಮಾತ್ರ ಸಂದರ್ಶನದ ಸಮಯದಲ್ಲಿ ಪರಿಶೀಲಿಸಿ ಸೂಕ್ತ ಅಂಕಗಳನ್ನು ವಿಶ್ವವಿದ್ಯಾಲಯದ ನಿಯಮಾನುಸಾರ ಪರಿಗಣಿಸಲಾಗುವುದು. ವಿಶ್ವವಿದ್ಯಾಲಯದ ನಿರ್ಣಯವೇ ಅಂತಿಮವಾಗಿರುತ್ತದೆ.

ಅಭ್ಯರ್ಥಿಗಳು ಕಡ್ಡಾಯವಾಗಿ Google Form ನ್ನು ತಪ್ಪದೇ ಭರ್ತಿಮಾಡತಕ್ಕದ್ದು ಒಂದುವೇಳೆ ಭರ್ತಿಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಎಲ್ಲಾ ಅಭ್ಯರ್ಥಿಗಳು Google Form ನ್ನು ಭರ್ತಿಮಾಡಿ Submitted Successfully ಅನ್ನುವ ಒಂದು ನಕಲು ಪ್ರತಿಯನ್ನು ಅರ್ಜಿಯೊಂದಿಗೆ ಕಡ್ಡಾಯವಾಗಿ ಲಗತ್ತಿಸಬೇಕು.

Google Form Link:

https://forms.gle/s6h3LY8zQmDhUxwN7

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

2 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

8 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

8 hours ago

ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ಸ   ಸನ್ಮಾನಿಸಿದರು

ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…

8 hours ago

ಕೇಂದ್ರ ಸಚಿವ ಗಡ್ಕರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…

8 hours ago

ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…

14 hours ago