ಬೆಂಗಳೂರು.15.ಆಗಸ್ಟ್.25:- ರಾಜ್ಯ ಸರ್ಕಾರ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಗಳಲ್ಲಿ ಅತಿಥಿ ಶಿಕ್ಷಕರ ತಾತ್ಕಾಲಿಕ ವ್ಯವಸ್ಥೆ ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದೆ.ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 34,027 ಪ್ರಾಥಮಿಕ ಹಾಗೂ 9499 ಪ್ರೌಢಶಾಲಾ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಅವರಬದಲಿಗೆ ಉತ್ತರ ನೀಡಿದ ಸಚಿವ ಸುಧಾಕರ್ ಅವರು, ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಮುಗಿದ ನಂತರ ಶಿಕ್ಷಕರ ಮರು ಹೊಂದಾಣಿಕೆ ಮಾಡಲಾಗುವುದು ಎಂದರು.
ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿ, ವಿದ್ಯಾರ್ಥಿಗಳ ಪಾಠ-ಪ್ರವಚನಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಕೊರತೆಯಿದ್ದು, ಹೊಸ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ಮಕ್ಕಳ ಸಂಖ್ಯೆ ಹೆಚ್ಚಿರುವ ಕಡೆಗಳಲ್ಲಿ ಶಿಕ್ಷಕರ ಮರು ಹೊಂದಾಣಿಕೆ ಮಾಡಲಾಗುತ್ತಿದೆ. 25 ಮಕ್ಕಳಿಗಿಂತ ಕಡಿಮೆಯಿರುವ 10000 ಶಾಲೆಗಳು ರಾಜ್ಯದಲ್ಲಿವೆ. ಶಾಲೆಗಳಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಆಹಾರ ನೀಡಲಾಗುವುದು ಎಂದರು.
ಒಂದರಿಂದ-5ನೇ ತರಗತಿಯವರೆಗಿನ ಹಿರಿಯ ಶಾಳೆಗಳಿಗೆ 30 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರನ್ನು ನಿಯೋಜಿಸಲಾಗುತ್ತದೆ. ಪ್ರೌಡಶಾಲೆಗಳಲ್ಲಿ 70 ವಿದ್ಯಾರ್ಥಿಗಳಿಗೆ ಒಂದು ವಿಭಾಗದಂತೆ ವಿಂಗಡಿಸಿ 7 ಶಿಕ್ಷಕರನ್ನು ನಿಗದಿಪಡಿಸಿದೆ. 5 ಅಥವಾ ಅದಕ್ಕಿಂತ ಹೆಚ್ಚಿರು ಶಾಲೆಗಳಿಗೆ ಮುಖ್ಯೋಪಾಧ್ಯಯರನ್ನು ಹೊರತು ಪಡಿಸಿ 1.5 ರಂತೆ ಶಿಕ್ಷಕರನ್ನು ನಿಗದಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಹಾಲಕ್ಷ್ಮೀ ವಿಧಾನಸಭಾ ಕ್ಷೇತ್ರದ ಕುರುಬರಹಳ್ಳಿ, ಕಮಲಾನಗರ, ಕೃಷ್ಣಾನಂದ ನಗರ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿದೆ. ಕಂಪ್ಯೂಟರ್, ವಿಜ್ಞಾನ, ರೊಬೋಟಿಕ್ ಲ್ಯಾಬ್ ಸೇರಿದಂತೆ ಮೂಲ ಸೌಲಭ್ಯಗಳನ್ನು ಶಾಸಕರು ಒದಗಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಶಾಸಕರ ಕೆ.ಗೋಪಾಲಯ್ಯ, ಕೃಷ್ಣಾನಂದ ನಗರ, ವೃಷಭಾವತಿ ನಗರ, ಕಮಲಾ ನಗರ, ಕುರುಬರಹಳ್ಳಿ ಶಾಲೆಗಳಿಗೆ 56 ಶಿಕ್ಷಕರ ಕೊರತೆ ಇದೆ. ಶಿಕ್ಷಕರಿಲ್ಲದೇ ಗುಣಮಟ್ಟದ ಶಿಕ್ಷಣ ಹೇಗೆ ಸಾಧ್ಯ. ಶಾಲೆಗಳಿಗೆ ಅನುದಾನವಿಲ್ಲದೇ ಉನ್ನತ ಮೂಲಸೌಲಭ್ಯಗಳೊಂದಿಗೆ, ಉನ್ನತ ದರ್ಜೆಯ ಕೊಠಡಿ ನಿರ್ಮಿಸಲಾಗಿದೆ.
ಅತಿಥಿ ಶಿಕ್ಷಕರಿಗೆ ಪ್ರತಿ ತಿಂಗಳು ಸರಿಯಾಗಿ ವೇತನ ನೀಡಬೇಕು, ಎಲ್‍ಕೆಜಿ-ಯಕೆಜಿಯಲ್ಲಿ ಪ್ರತಿಶಾಲೆಯಲ್ಲೂ 150 ಮಕ್ಕಳು ಇದ್ದಾರೆ. ಶಾಲೆಗಳಿಗೆ ಆಯಾಗಳು ಬೇಕು. ಕೇವಲ 30 ಮಕ್ಕಳಿಗೆ ಆಹಾರ ನೀಡುತ್ತಿದ್ದಾರೆ. ಈ ಸಂಬಂಧ ಶಿಕ್ಷಣ ಸಚಿವರು ಭೇಟಿ ನೀಡಿ ಒಮೆ ಪರೀಕ್ಷೀಸಲಿ,ಇ ಕಂಪ್ಯೂಟರ್, ವಿಜ್ಞಾನ, ರೊಬೋಟಿಕ್ ಲ್ಯಾಬ್, ಇ-ಲೈಬ್ರಿ ಸೌಲಭ್ಯ ಕಲ್ಪಿಸಿ ಮಾದರಿ ಶಾಲೆಗಳಾಗಿ ನಿರ್ಮಿಸಲಾಗಿದೆ ಎಂದರು.
ಬೆಂಗಳೂರು.15.ಆಗಸ್ಟ್.25:- ರಾಜ್ಯದಲ್ಲಿ ಖಾಯಂ ಶಿಕ್ಷಕರು ತುಂಬಿ ಇಲ್ಲದ ಕಾರಣ 2025-26 ಶೈಕ್ಷಣಿಕ ವರ್ಷದಲ್ಲಿ ಮೊದಲನೇ ಹಂತದಲ್ಲಿ ಜಿಲ್ಲಾವಾರು ಬೇಡಿಕೆಗೆ ಅನುಗುಣವಾಗಿ…
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…