06/08/2025 1:41 AM

Translate Language

Home » ಲೈವ್ ನ್ಯೂಸ್ » 2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

Facebook
X
WhatsApp
Telegram

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ.

ಈಗಾಗಲೇ ಕಳೆದ ಜುಲೈ 18 ನೇ ದಿನಾಂಕದಂದು AKSSA ಸಂಘಟನೆಯ ನೇತೃತ್ವದಲ್ಲಿ ತಮ್ಮ ಕಛೇರಿಗೆ ಭೇಟಿ ನೀಡಿ ಈ ಬಾರಿಯ ಕೌನ್ಸಿಲಿಂಗ್‌ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಬೇಗ ನಡೆಸಿ ಮತ್ತು ಈ ಪ್ರಕ್ರಿಯೆಯಲ್ಲಿ ಯುಜಿಸಿ ಅರ್ಹ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಬೇಕಾಗಿ ತಮ್ಮಲ್ಲಿ ವಿನಂತಿಸಿರುತ್ತೇವೆ.

ನಮ್ಮ ಮನವಿಯನ್ನು ಪರಿಗಣಿಸಿ ಹಲವಾರು ಬದಲಾವಣೆಗಳನ್ನೂ ಕೂಡ ನೀವು ತಂದಿರುತ್ತೀರಿ ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರಾದ ಮಾನ್ಯ ಶ್ರೀ ಮಂಜುಶ್ರೀ ಮೇಡಂ ರವರಿಗೆ ಧನ್ಯವಾದಗಳನ್ನು ತಿಳಿಯಪಡಿಸಲಿಚ್ಚಿಸುತ್ತೇವೆ. ಹಾಗು ಉಳಿದಂತೆ ಇನ್ನೂ ಮುಂದುವರೆಯಬೇಕಾದ ಹಲವಾರು ಪ್ರಕ್ರಿಯೆಗಳು ವಿಳಂಬವಾಗುತ್ತಲೇ ಇವೆ.

ಆದ್ದರಿಂದ ಯುಜಿಸಿ ಅರ್ಹ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಈ ಕೂಡಲೇ ಉಳಿದೆಲ್ಲ ಆಯ್ಕೆ ಪ್ರಕ್ರಿಯೆಗಳನ್ನು ಪ್ರಾರಂಭಿಸಿ ನಮನ್ನು ಅತಿಥಿ ಉಪನ್ಯಾಸಕರಾಗಿ ನೇಮಕ ಮಾಡಿಕೊಳ್ಳಲು ವಿನಂತಿಸುತ್ತಿದ್ದೇವೆ. ಹಾಗೆಯೇ ಈಗಾಗಲೇ ಮಾನಸಿಕ ಖಿನ್ನತೆಗೆ ಒಳಗಾಗಿರುವ ಯುಜಿಸಿ ಅರ್ಹ ಅಭ್ಯರ್ಥಿಗಳಾದ ನಾವು ಆಯ್ಕೆ ಪ್ರಕ್ರಿಯೆಯಲ್ಲಿನ ವಿಳಂಬ ನೀತಿಯನ್ನು ಖಂಡಿಸಿ ದಿನಾಂಕ 11/08/2025 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ AKSSA ಸಂಘಟನೆಯ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಯುಜಿಸಿ ಅರ್ಹ ಅಭ್ಯರ್ಥಿಗಳ ಬೃಹತ್ ಪ್ರತಿಭಟನೆಯನ್ನು ಕೈಗೊಳ್ಳುತ್ತೇವೆ ಎಂದು ಈ ಮೂಲಕ ತಿಳಿಯಪಡಿಸುತ್ತಿದ್ದೇವೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD