ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ.
ಈಗಾಗಲೇ ಕಳೆದ ಜುಲೈ 18 ನೇ ದಿನಾಂಕದಂದು AKSSA ಸಂಘಟನೆಯ ನೇತೃತ್ವದಲ್ಲಿ ತಮ್ಮ ಕಛೇರಿಗೆ ಭೇಟಿ ನೀಡಿ ಈ ಬಾರಿಯ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಬೇಗ ನಡೆಸಿ ಮತ್ತು ಈ ಪ್ರಕ್ರಿಯೆಯಲ್ಲಿ ಯುಜಿಸಿ ಅರ್ಹ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಬೇಕಾಗಿ ತಮ್ಮಲ್ಲಿ ವಿನಂತಿಸಿರುತ್ತೇವೆ.
ನಮ್ಮ ಮನವಿಯನ್ನು ಪರಿಗಣಿಸಿ ಹಲವಾರು ಬದಲಾವಣೆಗಳನ್ನೂ ಕೂಡ ನೀವು ತಂದಿರುತ್ತೀರಿ ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರಾದ ಮಾನ್ಯ ಶ್ರೀ ಮಂಜುಶ್ರೀ ಮೇಡಂ ರವರಿಗೆ ಧನ್ಯವಾದಗಳನ್ನು ತಿಳಿಯಪಡಿಸಲಿಚ್ಚಿಸುತ್ತೇವೆ. ಹಾಗು ಉಳಿದಂತೆ ಇನ್ನೂ ಮುಂದುವರೆಯಬೇಕಾದ ಹಲವಾರು ಪ್ರಕ್ರಿಯೆಗಳು ವಿಳಂಬವಾಗುತ್ತಲೇ ಇವೆ.
ಆದ್ದರಿಂದ ಯುಜಿಸಿ ಅರ್ಹ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಈ ಕೂಡಲೇ ಉಳಿದೆಲ್ಲ ಆಯ್ಕೆ ಪ್ರಕ್ರಿಯೆಗಳನ್ನು ಪ್ರಾರಂಭಿಸಿ ನಮನ್ನು ಅತಿಥಿ ಉಪನ್ಯಾಸಕರಾಗಿ ನೇಮಕ ಮಾಡಿಕೊಳ್ಳಲು ವಿನಂತಿಸುತ್ತಿದ್ದೇವೆ. ಹಾಗೆಯೇ ಈಗಾಗಲೇ ಮಾನಸಿಕ ಖಿನ್ನತೆಗೆ ಒಳಗಾಗಿರುವ ಯುಜಿಸಿ ಅರ್ಹ ಅಭ್ಯರ್ಥಿಗಳಾದ ನಾವು ಆಯ್ಕೆ ಪ್ರಕ್ರಿಯೆಯಲ್ಲಿನ ವಿಳಂಬ ನೀತಿಯನ್ನು ಖಂಡಿಸಿ ದಿನಾಂಕ 11/08/2025 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ AKSSA ಸಂಘಟನೆಯ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಯುಜಿಸಿ ಅರ್ಹ ಅಭ್ಯರ್ಥಿಗಳ ಬೃಹತ್ ಪ್ರತಿಭಟನೆಯನ್ನು ಕೈಗೊಳ್ಳುತ್ತೇವೆ ಎಂದು ಈ ಮೂಲಕ ತಿಳಿಯಪಡಿಸುತ್ತಿದ್ದೇವೆ.
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…