2025-26 ನೇ ಸಾಲಿನ ‘1 ನೇ ತರಗತಿ’ ವಯೋಮಿತಿ ನಿಗದಿ : ಶಿಕ್ಷಣ ಇಲಾಖೆಯಿಂದ ಆದೇಶ.!

ಬೆಂಗಳೂರು.30.ಏಪ್ರಿಲ್.25:- ಮಕ್ಕಳನ್ನು ಪ್ರಾಥಮಿಕ ಶಾಲೆಗೆ 2025-26 ನೇ ಸಾಲಿನ ‘1 ನೇ ತರಗತಿ’, ದಾಖಲಾತಿಗೆ ವಯೋಮಿತಿ ನಿಗದಿ  ಶಿಕ್ಷಣ ಇಲಾಖೆಯಿಂದ ಆದೇಶ ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿಯನ್ನು ನಿರ್ಧರಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.

ರಾಜ್ಯ ನೀತಿ ಆಯೋಗದ ಶಿಫಾರಸು / ಅಭಿಪ್ರಾಯವನ್ನು ಪರಿಗಣಿಸಿ ಸರ್ಕಾರದ ಆದೇಶ ಸಂಖ್ಯೆ : ಇಪಿ 260 ಪಿಜಿಸಿ 2021. ದಿನಾಂಕ : 26.07.2022ರಲ್ಲಿ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ 5 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿರುವುದಕ್ಕೆ ಒಂದು ಬಾರಿಯ ಕ್ರಮವಾಗಿ ಸಡಿಲಿಕೆಯನ್ನು ನೀಡಿ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿರುವ ಕಾರಣಗಳಿಂದ ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿರುವ ಹಾಗೂ ಜೂನ್ 1ನೇ ತಾರೀಖಿಗೆ 5 ವರ್ಷ 5 ತಿಂಗಳು ಪೂರ್ಣಗೊಂಡಿರುವ ಮಕ್ಕಳನ್ನು 2025-26ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಸೀಮಿತಗೊಳಿಸಿ ಒಂದನೇ ತರಗತಿಗೆ ದಾಖಲು ಮಾಡಿಕೊಳ್ಳಲು ಆದೇಶಿಸಿದೆ.

ಮುಂದುವರೆದು, 2026-27ನೇ ಶೈಕ್ಷಣಿಕ ವರ್ಷದಿಂದ ಜೂನ್ ಒಂದನೇ ತಾರೀಖಿಗೆ 06 ವರ್ಷಗಳು ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ಒಂದನೇ ತರಗತಿಗೆ ದಾಖಲಿಸಿಕೊಳ್ಳತಕ್ಕದ್ದು ಮತ್ತು ಸರ್ಕಾರದ ಆದೇಶ ಸಂಖ್ಯೆ : ಇಪಿ 100 ಪಿಜಿಸಿ 2024, ದಿನಾಂಕ : 26.06.2024ರಲ್ಲಿ ಈಗಾಗಲೇ ಎಲ್.ಕೆ.ಜಿ ಪ್ರವೇಶಾತಿಗೆ 4 ವರ್ಷ ಮತ್ತು ಯು.ಕೆ.ಜಿ ಪ್ರವೇಶಾತಿಗೆ 5 ವರ್ಷಗಳ ಕನಿಷ್ಠ ವಯೋಮಿತಿ ನಿಗಧಿಪಡಿಸಲಾಗಿರುತ್ತದೆ. ಅದರಂತೆ 2025-26ನೇ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿ. ಅಥವಾ ತತ್ಸಮಾನ ದಾಖಲಾತಿಗೆ 4 ವರ್ಷ ಪೂರ್ಣಗೊಂಡಿರುವ ಮತ್ತು ಯು.ಕೆ.ಜಿ ಅಥವಾ ತತ್ಸಮಾನ ದಾಖಲಾತಿಗೆ 5 ವರ್ಷ ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ದಾಖಲಿಸಿಕೊಳ್ಳತಕ್ಕದ್ದು.

ಮೇಲ್ಕಂಡ ಆದೇಶಗಳನ್ನು ತಮ್ಮ ಆಡಳಿತ ವ್ಯಾಪ್ತಿಯ ಎಲ್ಲಾ ಶಾಲೆಗಳಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯಸ್ಥರಿಗೆ ತಿಳಿಸಲಾಗಿದೆ. ಉಲ್ಲೇಖ ಸರ್ಕಾರದ ಆದೇಶ ಪ್ರತಿಯನ್ನು ಇದರೊಂದಿಗೆ ಅನುಬಂಧಿಸಿದೆ.

prajaprabhat

Recent Posts

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

6 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

11 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

16 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

22 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

22 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

22 hours ago