ನಾಳೆ ಸಂತ್ರಸ್ತರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ ಬೀದರ ಎಟಿಎಂ ದರೋಡೆ ಆರೋಪಿಗಳ ಬಂಧನಕ್ಕೆ: ಈಶ್ವರ ಖಂಡ್ರೆ
ಬೆಂಗಳೂರು, 16.ಜನವರಿ.25:- ಬೀದರ್ ನ ಭಾರತೀಯ ಸ್ಟೇಟ್ ಬ್ಯಾಂಕ್ ಬಳಿ ಇಂದು ಹಾಡು ಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಸಿಬ್ಬಂದಿಯನ್ನು ಕೊಂದು ಹಣ ದರೋಡೆ ಮಾಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಆರೋಪಿಗಳ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಂಡಿನ ದಾಳಿಯಲ್ಲಿ ಸಿಬ್ಬಂದಿ ಮೃತಪಟ್ಟಿರುವುದು ತೀವ್ರ ನೋವಿನ ಸಂಗತಿ. ಮೃತರ ಕುಟುಂಬದವರಿಗೆ ಈ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು…