ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ ಮಾಡಲುನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಸಂದರ್ಶನ ಜ.22ಕ್ಕೆ
|

ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ ಮಾಡಲು
ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಸಂದರ್ಶನ ಜ.22ಕ್ಕೆ

ಬೀದರ.17ಜನವರಿ.25:- ಬೀದರ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಜನವರಿ.22 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಬೀದರ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಯವಾಗಿ 18 ವರ್ಷ ವಯಸ್ಸಾಗಿರಬೇಕು, ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಹಾಗೂ ಸಲಹೆಗಾರರು,…

ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ ಮತ್ತು ಕುಟುಂಬದವರನ್ನು ಹೈದ್ರಾಬಾದನಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ ಮತ್ತು ಕುಟುಂಬದವರನ್ನು ಹೈದ್ರಾಬಾದನಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.17. ಜನವರಿ.25 :-ಬೀದರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಇಂದು ಹೈದ್ರಾಬಾದಗೆ ತೆರಳಿ ಎಸಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಹೈದ್ರಾಬಾದನ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ ಹಾಗೂ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಚಿಕಿತ್ಸೆಯ ಕುರಿತು ವೈದ್ಯರೊಂದಿಗೆ ಮಾತುಕತೆ ನಡೆಸಿದರು.

ಆರ್ಥಿಕ ಬೆಳವಣಿಗೆಗೆ ಕೃಷಿಯ ಜೊತೆ ಹೈನುಗಾರಿಕೆ ಕೋಳಿ, ಮೀನು ಸಾಕಾಣಿಕೆಗೂ ಆದ್ಯತೆ ನೀಡಿ-ಸಚಿವ ಈಶ್ವರ ಬಿ.ಖಂಡ್ರೆ
|

ಆರ್ಥಿಕ ಬೆಳವಣಿಗೆಗೆ ಕೃಷಿಯ ಜೊತೆ ಹೈನುಗಾರಿಕೆ ಕೋಳಿ, ಮೀನು ಸಾಕಾಣಿಕೆಗೂ ಆದ್ಯತೆ ನೀಡಿ-ಸಚಿವ ಈಶ್ವರ ಬಿ.ಖಂಡ್ರೆ

ಬೀದರ 17. ಜನವರಿ.25:- ಪ್ರಕೃತಿ ವಿಕೋಪ ಬದಲಾಗುತ್ತಿರುವ ಹವಾಮಾನ ವೈಪರಿತ್ಯ ಎದುರಿಸುವ ನಿಟ್ಟಿನಲ್ಲಿ ರೈತರು ಆರ್ಥಿಕವಾಗಿ ಸಬಲರಾಗಲು ಕೃಷಿಯ ಜೊತೆಯಲ್ಲಿ ಹೈನುಗಾರಿಕೆ, ಕೋಳಿ ಹಾಗೂ ಮೀನು ಸಾಕಾಣಿಕೆಗೂ ಕೂಡ ಮಹತ್ವ ನೀಡುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ತಿಳಿಸಿದರು. ಅವರು ಇಂದು ಬೀದರನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 20ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಜಾನುವಾರು ಕುಕ್ಕುಟ ಹಾಗೂ ಮತ್ಸö್ಯಮೇಳವನ್ನು ಉದ್ಘಾಟಿಸಿ…

ಬ್ಯಾಂಕ್ ದರೋಡೆ ಪ್ರಕರಣ: ಬೆಮಳಖೇಡ ಗ್ರಾಮದ ಸಂತ್ರಸ್ತ ಕುಟುಂಬಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ.
|

ಬ್ಯಾಂಕ್ ದರೋಡೆ ಪ್ರಕರಣ: ಬೆಮಳಖೇಡ ಗ್ರಾಮದ ಸಂತ್ರಸ್ತ ಕುಟುಂಬಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ.

ಬೀದರ.17.ಜನವರಿ.25:- ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಇಂದು ಬ್ಯಾಂಕ್ ದರೋಡೆ ಸಂದರ್ಭದಲ್ಲಿ ದರೋಡೆಕೋರರ ಗುಂಡೇಟಿಗೆ ಬಲಿಯಾದ ಬೆಮಲಖೇಡ ಗ್ರಾಮದ ಗಿರಿ ವೆಂಕಟೇಶ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸರಕಾರದ ಬ್ಯಾಂಕ್ ಹಣವನ್ನು ಕಾಪಾಡುವ ನಿಟ್ಟಿನಲ್ಲಿ ಬಲಿಯಾದ ಗಿರಿ ವೆಂಕಟೇಶ ಕುಟುಂಬಕ್ಕೆ ಸರಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ದೊರಕಬೇಕಾದ ಎಲ್ಲ ಸಹಾಯ ಸವಲತ್ತುಗಳನ್ನು ದೊರಕಿಸಿಕೊಡಲಾಗುವುದೆಂದು ಹೇಳಿದರು. ಅಲ್ಲದೇ ಮುಖ್ಯಮಂತ್ರಿಗಳೊAದಿಗೆ ಈಗಾಗಲೇ ಚರ್ಚಿಸಲಾಗಿ ಕುಟುಂಬಕ್ಕೆ…

ಜ.23 ರಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್,ಅವರ ಬೀದರ ಜಿಲ್ಲಾ ಪ್ರವಾಸ ಕಾರ್ಯಕ್ರಮ
|

ಜ.23 ರಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್,ಅವರ ಬೀದರ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಬೀದರ.17ಜನವರಿ.25:- ಬೀದರ ಜಿಲ್ಲೆಗೆ ಇಂಧನ ಸಚಿವರು ಹಾಗೂ ಚಿಕ್ಕಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಅವರು ಜನವರಿ.23 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ. ಅಂದು ಅವರು ಬೆಳಿಗ್ಗೆ 9.45ಕ್ಕೆ ಬೀದರ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಳಿಗ್ಗೆ 10 ಗಂಟೆಗೆ ಬೀದರ ಜಿಲ್ಲಾ ಕಾಂಗರೆಸ್ ಸಮಿತಿ ಕಚೇರಿಗೆ ಭೇಟಿ ನೀಡಲಿದ್ದಾರೆ. ನಂತರ ಬೆಳಿಗ್ಗೆ 11 ಗಂಟೆಗೆ ಬೀದರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಯ ವಿಷಯಗಳ ಕುರಿತು ಚರ್ಚಿಸಲು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ…

ಇ-ಖಜಾನೆ (ಡಿಜಿಟಲ್ ಭೂ ದಾಖಲೆ ಸಂಗ್ರಹ ಕೇಂದ್ರ) ಉದ್ಘಾಟಿಸಿದ ಸಚಿವ ಈಶ್ವರ ಬಿ.ಖಂಡ್ರೆ
|

ಇ-ಖಜಾನೆ (ಡಿಜಿಟಲ್ ಭೂ ದಾಖಲೆ ಸಂಗ್ರಹ ಕೇಂದ್ರ) ಉದ್ಘಾಟಿಸಿದ ಸಚಿವ ಈಶ್ವರ ಬಿ.ಖಂಡ್ರೆ

ಬೀದರ 17.ಜನವರಿ.25:- ಭೂ ಸುರಕ್ಷಾ ಯೋಜನೆಯ ಅಡಿಯಲ್ಲಿ ಹೊಸದಾಗಿ ಆರಂಭಿಸಿದ ಇ-ಖಜಾನೆ (ಡಿಜಿಟಲ್ ಭೂ ದಾಖಲೆ ಸಂಗ್ರ ಕೇಂದ್ರ) ವನ್ನು ಇಂದು ಬೀದರ ತಾಲ್ಲೂಕಿನ ತಹಸೀಲ್ದಾರ ಕಛೇರಿಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಉದ್ಘಾಟಿಸಿದರು. ನಂತರ ಮಾತನಾಡಿ ಹಳೆಯ, ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತ ಡಿಜಿ ದಾಖಲೆಗಳಾಗಿ ಪರಿವರ್ತಿಸುವುದು, ರೆಕಾರ್ಡ್ ರೂಂಗಳಿAದ ದಾಖಲೆ ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆ, ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳವು- ತಿದ್ದುಪಡಿ…

BPL’ ಕಾರ್ಡ್ ಹೊಂದಿರುವವರಿಗೆ: ಇನ್ಮುಂದೆ ‘MRI, ಸಿಟಿ ಸ್ಕ್ಯಾನ್’ ಫ್ರೀ!
|

BPL’ ಕಾರ್ಡ್ ಹೊಂದಿರುವವರಿಗೆ: ಇನ್ಮುಂದೆ ‘MRI, ಸಿಟಿ ಸ್ಕ್ಯಾನ್’ ಫ್ರೀ!

ಬೆಂಗಳೂರು : 17.ಜನವರಿ.25:- ರಾಜ್ಯ ಸರ್ಕಾರ ಜನ ಕಲ್ಯಾಣಕ್ಕಾಗಿ ಇನ್ಮುಂದೆ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಇದೀಗ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡ್ಗಳನ್ನು ಹೊಂದಿದಂತಹ ಫಲಾನುಭವಿಗಳಿಗೆ ಎಂ ಆರ್ ಐ ಹಾಗೂ ಸಿಟಿ ಸ್ಕ್ಯಾನಿಂಗ್ ಸೇವೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದು. ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಎಂ ಆರ್ ಐ ಹಾಗೂ ಸಿಟಿ ಸ್ಕ್ಯಾನ್ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ. ನಿನ್ನೆ ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ…

ಎಸಬಿಐ ಬ್ಯಾಂಕ್ ದರೋಡೆ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
|

ಎಸಬಿಐ ಬ್ಯಾಂಕ್ ದರೋಡೆ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೀದರ.17.ಜನವರಿ.25:- ಇಂದು ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಇಂದು ಬೀದರ್‌ನಲ್ಲಿ ನಡೆದ ಎಸಬಿಐ ಬ್ಯಾಂಕ್ ದರೋಡೆ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಾದ ಎಡಿಜಿಪಿ (ಅಪರಾಧ), ಐಜಿಪಿ, ಎಸ್ಪಿ ಮತ್ತು ಇತರ ಹಿರಿಯ ಅಧಿಕಾರಿಗಳು ಅವರ ಜೊತೆ ಹಾಜರಿದ್ದರು. ಸಚಿವರು ಘಟನೆ ಕುರಿತು ಮಾಹಿತಿ ಪಡೆದು, ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಪಿಗಳ ಪತ್ತೆಗೆ ವಿಶೇಷ ತನಿಖಾ…

ಎಸಬಿಐ ಬ್ಯಾಂಕ್ ಗಿರಿ ವೆಂಕಟೇಶ ಅವರ ಚಿಕಿತ್ಸೆ ವೆಚ್ಚದ ಬಗ್ಗೆ ಯಾವುದೇ ಚಿಂತೆ ಮಾಡಬೇಡಿ ಎಂದು ಆಶ್ವಾಸನೆ ನೀಡಿದರು. ಸಚಿವ ಈಶ್ವರ್ ಖಂದ್ರೆ
|

ಎಸಬಿಐ ಬ್ಯಾಂಕ್ ಗಿರಿ ವೆಂಕಟೇಶ ಅವರ ಚಿಕಿತ್ಸೆ ವೆಚ್ಚದ ಬಗ್ಗೆ ಯಾವುದೇ ಚಿಂತೆ ಮಾಡಬೇಡಿ ಎಂದು ಆಶ್ವಾಸನೆ ನೀಡಿದರು. ಸಚಿವ ಈಶ್ವರ್ ಖಂದ್ರೆ

ಬೀದರ.17.ಜನವರಿ.25.ಇಂದು ಬೀದರ್‌ನಲ್ಲಿ ನಡೆದ ಎಸಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ಗಿರಿ ವೆಂಕಟೇಶ್ ಎಂಬ ಭದ್ರತಾ ಸಿಬ್ಬಂದಿ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದು, ಶಿವಕುಮಾರ್ ಎಂಬ ಮತ್ತೊಬ್ಬ ಭದ್ರತಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡು ಹೈದ್ರಾಬಾದ್‌ನ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರಣ್ಯ, ಪರಿಸರ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಈಶ್ವರ ಖಂಡ್ರೆ ಅವರು ಇಂದು ರಾತ್ರಿ ಸುಮಾರು 9 ಗಂಟೆಗೆ ಬೆಂಗಳೂರಿನಿಂದ ಹೈದ್ರಾಬಾದ್‌ಗೆ ಆಗಮಿಸಿ, ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಶಿವಕುಮಾರ್ ಅವರ ಕುಟುಂಬದವರನ್ನು ಭೇಟಿಯಾಗಿ…

ಸಾರ್ವಜನಿಕರಿಗೆ ಕೇಂದ್ರ ಪುರಸ್ಕೃತ ಯೋಜನೆಗಳು ಸಕಾಲದಲ್ಲಿ ತಲುಪುವಂತಾಗಬೇಕು-ಸಂಸದ ಸಾಗರ ಈಶ್ವರ ಖಂಡ್ರೆ
|

ಸಾರ್ವಜನಿಕರಿಗೆ ಕೇಂದ್ರ ಪುರಸ್ಕೃತ ಯೋಜನೆಗಳು ಸಕಾಲದಲ್ಲಿ ತಲುಪುವಂತಾಗಬೇಕು-ಸಂಸದ ಸಾಗರ ಈಶ್ವರ ಖಂಡ್ರೆ

ಬೀದರ.17.ಜನವರಿ.25:- ವಿವಿಧ ಇಲಾಖೆಗಳಿಂದ ನಡೆಯುತ್ತಿರುವ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಸಕಾಲದಲ್ಲಿ ಸಾರ್ವಜನಿಕರಿಗೆ ತಲುಪುವಂತೆ ಮಾಡಬೇಕೆಂದು ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಗುರುವಾರದಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈಲ್ವೆ ಇಲಾಖೆಯ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳು ಆಮೆ ಗತಿಯಿಂದ ಸಾಗುತ್ತಿರುವ ಕಾಮಗಾರಿಗಳು ವೇಗದಿಂದ ಮುಕ್ತಾಯಗೊಳಿಸಿ ಸಾರ್ವಜನಿಕರಿಗೆ…