ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟಕ್ಕೆ ಸಮರ್ಪಕವಾಗಿ ತೊಗರಿಬೇಳೆ ಹಾಗೂ ಅಡುಗೆ ಎಣ್ಣೆ ಪೂರೈಕೆಯಾಗುತ್ತಿಲ್ಲ.!
ಮೈಸೂರು.12.ಮಾರ್ಚ.25:- ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಬಹುತೇಕ ಶಾಲೆಗಳಲ್ಲಿ ಬಿಸಿಯೂಟಕ್ಕೆ ಸಮರ್ಪಕವಾಗಿ ತೊಗರಿಬೇಳೆ ಹಾಗೂ ಅಡುಗೆ ಎಣ್ಣೆ ಪೂರೈಕೆಯಾಗುತ್ತಿಲ್ಲ ಎಂಬುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ, ಸದರಿ ಜಿಲ್ಲೆಯಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮ ಎಂದಿನಂತೆ ನಡೆಯುತ್ತಿದ್ದು, ಯಾವುದೇ ಸಮಸ್ಯೆಗಳಿರುವುದಿಲ್ಲ. ತಾಲ್ಲೂಕಿನ ಎಲ್ಲಾ ಶಾಲೆಗಳಿಗೆ ಗುಣಮಟ್ಟವಿರುವ ಬಿಸಿಯೂಟ, ಪೌಷ್ಠಿಕ ಆಹಾರವನ್ನು ವಿತರಿಸಲಾಗುತ್ತಿದ್ದು, ಇನ್ನು ಮುಂದೆ ಆಹಾರ ಧಾನ್ಯಗಳ ಕೊರತೆಯಾಗದಂತೆ…