ಭಾರತ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಕೊಡುಗೆ ಅಪಾರ-ಸಚಿವ ಈಶ್ವರ ಬಿ.ಖಂಡ್ರೆ.
ಬೀದರ.14.ಏಪ್ರಿಲ್.25:- ಮಹಾಮಾನವತಾವಾದಿ ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ನಮ್ಮ ದೇಶಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದರು. ಅವರು ಸೋಮವಾರ ಸಂಜೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರ ಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ…