ಕಲಬುರಗಿ ಅಭಿವೃದ್ದಿಗಾಗಿ: ₹644 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಕಲಬುರಗಿ.16.ಏಪ್ರಿಲ್.25:-ಇಲ್ಲಿನ ಗುಲಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹ 222.73 ಕೋಟಿ ಮೊತ್ತದ ಯೋಜನೆಗಳನ್ನು ಉದ್ಘಾಟಿಸಿ, ₹ 421 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಜಿಮ್ಸ್ ಆವರಣದ ₹ 216.53 ಕೋಟಿ ಮೊತ್ತದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ₹ 6.20 ಕೋಟಿ ಮೊತ್ತದ ಬ್ರಾಕಿಥೆರಪಿ ಘಟಕವನ್ನು ಉದ್ಘಾಟನೆ ಮಾಡಿದರು. ತಲಾ ₹ 92 ಕೋಟಿ ವೆಚ್ಚದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯ…