ದಲಿತರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಡಳಿತ ಮತ್ತುಪೊಲೀಸ್ ಇಲಾಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ
|

ದಲಿತರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಡಳಿತ ಮತ್ತು
ಪೊಲೀಸ್ ಇಲಾಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೀದರ.02.ಮೇ.25:- ಬೀದರ್ ಜಿಲ್ಲೆಯ ಕೆಲವು ಕಡೆ ದಲಿತರ ಮೇಲೆ ಹಲ್ಲೆ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ತ್ವರಿತ ಕ್ರಮಕ್ಕೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ದೂರಿನಲ್ಲಿ ನೊಂದವರು ತಕ್ಷಣವೇ ರಕ್ಷಣೆ ಪಡೆಯಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಚಿವರು ಹೇಳಿದ್ದಾರೆ. ಬಸವಣ್ಣರು ನಿರ್ಮಿಸಿದ ಸಮತೆಯ ಸಮಾಜದ ತತ್ವಗಳಿಗೆ ಹಾಗೂ ಡಾ….

ಏಪ್ರಿಲ್‌ನಲ್ಲಿ ಜಿಎಸ್‌ಟಿ ಸಂಗ್ರಹವು ದಾಖಲೆಯ ₹2.37 ಲಕ್ಷ ಕೋಟಿ ತಲುಪಿದ್ದು, ವರ್ಷದಿಂದ ವರ್ಷಕ್ಕೆ ಶೇ.12.6 ರಷ್ಟು ಏರಿಕೆಯಾಗಿದೆ.
|

ಏಪ್ರಿಲ್‌ನಲ್ಲಿ ಜಿಎಸ್‌ಟಿ ಸಂಗ್ರಹವು ದಾಖಲೆಯ ₹2.37 ಲಕ್ಷ ಕೋಟಿ ತಲುಪಿದ್ದು, ವರ್ಷದಿಂದ ವರ್ಷಕ್ಕೆ ಶೇ.12.6 ರಷ್ಟು ಏರಿಕೆಯಾಗಿದೆ.

ಕಳೆದ ವರ್ಷ ಇದೇ ತಿಂಗಳಿಗೆ ಹೋಲಿಸಿದರೆ ಏಪ್ರಿಲ್‌ನಲ್ಲಿ ಭಾರತದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಶೇ. 12.6 ರಷ್ಟು ಹೆಚ್ಚಾಗಿ ಸಾರ್ವಕಾಲಿಕ ಗರಿಷ್ಠ 2.37 ಲಕ್ಷ ಕೋಟಿ ರೂಪಾಯಿಗಳಿಗೆ ತಲುಪಿದೆ. ಸರ್ಕಾರಿ ಅಂಕಿಅಂಶಗಳ ಪ್ರಕಾರ, ಈ ತಿಂಗಳ ಕೇಂದ್ರ ಜಿಎಸ್‌ಟಿ ಸಂಗ್ರಹವು 48 ಸಾವಿರದ 634 ಕೋಟಿ ರೂಪಾಯಿಗಳು ಮತ್ತು ರಾಜ್ಯ ಜಿಎಸ್‌ಟಿ 59 ಸಾವಿರದ 372 ಕೋಟಿ ರೂಪಾಯಿಗಳಷ್ಟಿದೆ. ಸಮಗ್ರ ಜಿಎಸ್‌ಟಿ ಸಂಗ್ರಹವು 1.1 ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚು ಮತ್ತು ಸೆಸ್…

ಜಾಗತಿಕ ವೇದಿಕೆಯಲ್ಲಿ ಭಾರತದ ಸೃಜನಶೀಲ ಸಾಮರ್ಥ್ಯಗಳನ್ನು ವೇವ್ಸ್ ಶೃಂಗಸಭೆ ಎತ್ತಿ ತೋರಿಸುತ್ತದೆ: ಪ್ರಧಾನಿ ಮೋದಿ
|

ಜಾಗತಿಕ ವೇದಿಕೆಯಲ್ಲಿ ಭಾರತದ ಸೃಜನಶೀಲ ಸಾಮರ್ಥ್ಯಗಳನ್ನು ವೇವ್ಸ್ ಶೃಂಗಸಭೆ ಎತ್ತಿ ತೋರಿಸುತ್ತದೆ: ಪ್ರಧಾನಿ ಮೋದಿ

ಜಾಗತಿಕ ವೇದಿಕೆಯಲ್ಲಿ ಭಾರತದ ಸೃಜನಶೀಲ ಸಾಮರ್ಥ್ಯಗಳನ್ನು WAVES ಎತ್ತಿ ತೋರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಭಾರತ ಚಲನಚಿತ್ರ ನಿರ್ಮಾಣ, ಡಿಜಿಟಲ್ ವಿಷಯ, ಗೇಮಿಂಗ್, ಫ್ಯಾಷನ್, ಸಂಗೀತ ಮತ್ತು ನೇರ ಸಂಗೀತ ಕಚೇರಿಗಳಿಗೆ ಜಾಗತಿಕ ಕೇಂದ್ರವಾಗಿ ಹೊರಹೊಮ್ಮುತ್ತಿದೆ ಎಂದು ಅವರು ಹೇಳಿದರು. ಇಂದು ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆದ WAVES 2025 ರ ವಿಶ್ವ ಆಡಿಯೋ ದೃಶ್ಯ ಮತ್ತು ಮನರಂಜನಾ ಶೃಂಗಸಭೆಯನ್ನು ಉದ್ಘಾಟಿಸಿದ ನಂತರ ಶ್ರೀ ಮೋದಿ ಅವರು ಈ ವಿಷಯ ತಿಳಿಸಿದರು….

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ಯಾರನ್ನೂ ಸರ್ಕಾರ ಬಿಡುವುದಿಲ್ಲ: ಗೃಹ ಸಚಿವ ಅಮಿತ್ ಶಾ
|

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ಯಾರನ್ನೂ ಸರ್ಕಾರ ಬಿಡುವುದಿಲ್ಲ: ಗೃಹ ಸಚಿವ ಅಮಿತ್ ಶಾ

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಯಾರನ್ನೂ ಸರ್ಕಾರ ಬಿಡುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಇಂದು ಹೇಳಿದ್ದಾರೆ. ನವದೆಹಲಿಯಲ್ಲಿ ಬೋಡೋ ನಾಯಕ ಬೋಡೋಫಾ ಉಪೇಂದ್ರನಾಥ್ ಬ್ರಹ್ಮ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಅವರ ಹೆಸರಿನಲ್ಲಿ ರಸ್ತೆಯನ್ನು ಲೋಕಾರ್ಪಣೆ ಮಾಡಿದ ನಂತರ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಗೃಹ ಸಚಿವರು ಈ ಹೇಳಿಕೆಗಳನ್ನು ನೀಡಿದರು. ದೇಶದ ಪ್ರತಿಯೊಂದು ಇಂಚಿನಿಂದಲೂ ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತುಹಾಕುವ ಸರ್ಕಾರದ ಸಂಕಲ್ಪವನ್ನು ಪುನರುಚ್ಚರಿಸಿದ ಶ್ರೀ ಶಾ, ಭಯೋತ್ಪಾದನೆಯ ವಿರುದ್ಧದ ಹೋರಾಟ ಮುಂದುವರಿಯುತ್ತದೆ ಮತ್ತು ಈ ದಾಳಿಯನ್ನು…