SC/ST ಮೇಲಿನ ದಾಖಲಾಗುವ ಪ್ರಕರಣಗಳನ್ನು DCRE ಪೊಲೀಸ್ ಠಾಣೆಗಳಿಗೆ ವರ್ಗಾಯಿಸಲು ಸೂಚಿಸಲಾಗಿದೆ.
ಬೆಂಗಳೂರು.13.ಜೂನ್.25:- ರಾಜ್ಯದ ಡಿಸಿಆರ್‌ಇ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸುವ ಮತ್ತು ತನಿಖೆ ನಡೆಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ (1)ರ ಅಧಿಸೂಚನೆಯಲ್ಲಿ ರಾಜ್ಯಾದ್ಯಂತ ಒಟ್ಟು 33 ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ಸದರಿ ಅಧಸೂಚನೆಯಲ್ಲಿ ನಮೂದಿಸಿರುವ ಕಾಯಿದೆಗಳಡಿ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ಮುಂದಿನ ತನಿಖೆಗಾಗಿ ಡಿ.ಸಿ.ಆರ್.ಇ ಪೊಲೀಸ್ ಠಾಣೆಗಳಿಗೆ ಉಲ್ಲೇಖಿತ (2)ರ ಸರ್ಕಾರದ ಆದೇಶದಲ್ಲಿ ನೀಡಿರುವ ಮಾರ್ಗಸೂಚಿಗಳನ್ವಯ…