ರಾಜ್ಯದಲ್ಲಿ 13,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ.!
ರಾಜ್ಯದ ಶಾಲೆಗಳಲಿ 13,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ ಬಿಪಿಎಸ್ಸಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡುವಲ್ಲಿ ನಮ್ಮ ಸರ್ಕಾರವು ಬದ್ಧವಾಗಿದೆ. ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿಶೇಷ ಜವಾಬ್ದಾರಿ ವಹಿಸಲಾಗಿದ್ದು, ಶಾಲಾ ಸಮಯ ಹೊರತುಪಡಿಸಿ, ಸಂಜೆ ಸಮಯದಲ್ಲೂ ಮಕ್ಕಳಿಗೆ ವಿಶೇಷ ತರಗತಿಗಳ ಮೂಲಕ ಅಭ್ಯಾಸಿಸಲು ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದರು. ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಪರೀಕ್ಷಾ ಕೇಂದ್ರಗಳಲ್ಲಿ…