ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ಖಚಿತ.
ಬೆಂಗಳೂರು .19.ಜೂನ್.25:- ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ಖಚಿತವಾಗಿದ್ದು, ಆಗಸ್ಟ್ 11, 2025 ರಿಂದ ಈ ಕಲಾಪ ಆರಂಭವಾಗಲಿದೆ. ರಾಜ್ಯ ಸರ್ಕಾರವು ಈ ಬಗ್ಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಎರಡು ವಾರಗಳ ಕಾಲ ವಿಧಾನಸಭೆಯ ಕಲಾಪ ನಡೆಯಲಿದೆ. ಈ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದ್ದು, ಜನರಿಗೆ ಸಂಬಂಧಿಸಿದ ವಿಷಯಗಳಿಗೆ ಪರಿಹಾರ ಕಂಡುಕೊಳ್ಳುವ ನಿರೀಕ್ಷೆಯಿದೆ. ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನವು ರಾಜಕೀಯವಾಗಿಯೂ ಗಮನ ಸೆಳೆಯುವ ಸಾಧ್ಯತೆಯಿದೆ. ರಾಜ್ಯದ ಜನತೆಯ…