ಅಂಗನವಾಡಿ ಕೇಂದ್ರ, ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಚಿಟ್ಟಾವಾಡಿಯಲ್ಲಿರುವ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ ಕೆಲಕಾಲ ಬೆರೆತು, ಅವರ ಆರೋಗ್ಯ ಹಾಗೂ ದೈನಂದಿನ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಮಕ್ಕಳಿಗೆ ಪೂರೈಕೆ ಮಾಡುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಜೊತೆಗೆ ಮಕ್ಕಳ ಕಲಿಕಾ ಆಸಕ್ತಿ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಮೊಟ್ಟೆ ಗಳನ್ನು ಕೊಟ್ಟಿದ್ದಾರಾ? ಪಾಯಸ…