ರಾಜ್ಯ ಸರ್ಕಾರದಿಂದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ವಿಶೇಷ ಮಾಹಿತಿ.!
ಬೆಂಗಳೂರು.10.ಜುಲೈ .25:- 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೇಮಕವಾದ ಪದವೀಧರ ಪ್ರಾಥಮಿಕ ಶಿಕ್ಷಕರ ಹಿಂದಿನ ಸೇವೆಯನ್ನು ವೇತನ ಸಂರಕ್ಷಣೆ ಉದ್ದೇಶಕ್ಕಾಗಿ ಪರಿಗಣಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2022-23ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಎಸ್. ಎಲ್.ಪಿ. ದಾಖಲಾಗಿದ್ದು, ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆ ನೀಡಿರುವುದರಿಂದ ಅಂತಿಮ ಆದೇಶ ಬಂದ ನಂತರ ಕ್ರಮವಹಿಸುವಂತೆ ಸೂಚಿಸಿರುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ವೇತನ ಸಂರಕ್ಷಣೆ ಸಂಬಂಧಿತ ಕಡತಗಳು ವಿಲೇವಾರಿಯಾಗದೆ…