ಭಿಕ್ಷಾಟನೆ: 19 ಜನರನ್ನು ರಕ್ಷಿಸಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ.13.ಜುಲೈ.25:- ಜಿಲ್ಲೆಯ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಭಿಕ್ಷಾಟನೆ ನಡೆಯುವ ಸ್ಥಳಗಳಲ್ಲಿ ಸ್ಥಳ ಪರಿಶೀಲನೆ ನಡೆಸಿ 19 ಜನರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ. 19 ಜನರಲ್ಲಿ 14 ಮಕ್ಕಳು ಅವರಲ್ಲಿ ಎರಡು ಮಕ್ಕಳಿಗೆ ಜಿಲ್ಲಾ ಆರೋಗ್ಯ ಕೇಂದ್ರ ಬೀದರ (ಬ್ರೀಮ್ಸ್) ಕೇಂದ್ರದಲ್ಲಿ ಆರೋಗ್ಯ ತಪಾಸಣೆಗಾಗಿ ದಾಖಲು ಮಾಡಲಾಗಿದೆ. 12 ಮಕ್ಕಳನ್ನು ಹಾಗೂ 03 ಜನ ಮಹಿಳೆಯರಿಗೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿನದಲ್ಲಿ ಬರುವ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇಡಲಾಗಿದೆ….