ಧರ್ಮಸ್ಥಳದಲ್ಲಿ ಕೊಲೆ: ತನಿಖೆಗೆ ಆಗ್ರಹ
ತುಮಕೂರು.17.ಜುಲೈ.25: ಇಂದು ದಲಿತ ಸಂಘರ್ಷ ಸಮಿತಿ (ಪರಿವರ್ತನ ವಾದ) ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಅವರಿಗೆ ಸಮಿತಿ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು. ಧರ್ಮಸ್ಥಳ ಭಾಗದಲ್ಲಿ 20 ವರ್ಷಗಳಿಂದ ನೂರಾರು ವಿದ್ಯಾರ್ಥಿನಿಯರು, ಮಹಿಳೆಯರ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಸಮಿತಿಯ ಬೆಂಗಳೂರು ವಿಭಾಗೀಯ…