ಯಲಬುರ್ಗಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ
|

ಯಲಬುರ್ಗಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ

ಕೊಪ್ಪಳ.18.ಜುಲೈ.25: ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ ಕೊಪ್ಪಳ, ತಾಲೂಕು ಬಾಲ ಭವನ ಸಮಿತಿ ಯಲಬುರ್ಗಾ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಯಲಬುರ್ಗಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂಬರ್ 01ರಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೇಟ್ಟದೇಶ ಮಾಳೆಕೊಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ…

ಮುನಿರಾಬಾದ್: ಇಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ
|

ಮುನಿರಾಬಾದ್: ಇಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

ಕೊಪ್ಪಳ.18.ಜುಲೈ.25:- ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಮುನಿರಾಬಾದ್ ಕಚೇರಿ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಜುಲೈ 19 ರಂದು ಬೆಳಿಗ್ಗೆ 11 ಗಂಟೆಗೆ ಮುನಿರಾಬಾದ್ ಜೆಸ್ಕಾಂ ಕಚೇರಿಯಲ್ಲಿ ಏರ್ಪಡಿಸಲಾಗಿದೆ. ಸರ್ಕಾರದ ಆದೇಶದನ್ವಯ ಹಾಗೂ ಮೇಲಾಧಿಕಾರಿಗಳ ನಿರ್ದೇಶನದನ್ವಯ ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ಪ್ರತಿ ತಿಂಗಳಿನ 3ನೇ ಶನಿವಾರದಂದು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅದರಂತೆ…

ಇಂದು ಕೊಪ್ಪಳದಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ
|

ಇಂದು ಕೊಪ್ಪಳದಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಕೊಪ್ಪಳ.18.ಜುಲೈ.25: ಜೆಸ್ಕಾಂ ಕೊಪ್ಪಳ ಉಪ-ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿದ್ಯುತ್‌ಚ್ಛಕ್ತಿ ಗ್ರಾಹಕರ ವಿದ್ಯುತ್‌ಚ್ಛಕ್ತಿಗೆ ಸಂಬAಧಿಸಿದ ಅಹವಾಲುಗಳು ಮತ್ತು ಕುಂದು-ಕೊರತೆಗಳನ್ನು ಪರಿಹರಿಸಲು ವಿದ್ಯುತ್ ಗ್ರಾಹಕರ ಕುಂದುಕೊರತೆಗಳ ಸಭೆಯನ್ನು ಜುಲೈ 19 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಕಾರ್ಯ ಮತ್ತು ಪಾಲನಾ ಉಪ-ವಿಭಾಗ ಕಛೇರಿಯಲ್ಲಿ ಆಯೋಜಿಸಲಾಗಿದೆ. ಸಂಬoಧಿಸಿದ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ವಿದ್ಯುತ್‌ಗೆ ಸಂಬAಧಿಸಿದ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಜೆಸ್ಕಾಂ ಕೊಪ್ಪಳ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜು. 22 ರಂದು ಕೊಪ್ಪಳದಲ್ಲಿ ಹಡಪದ ಅಪ್ಪಣ್ಣ ಜಯಂತಿ
|

ಜು. 22 ರಂದು ಕೊಪ್ಪಳದಲ್ಲಿ ಹಡಪದ ಅಪ್ಪಣ್ಣ ಜಯಂತಿ

ಕೊಪ್ಪಳ.18.ಜುಲೈ.25: ಕೊಪ್ಪಳ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಜುಲೈ 22 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ…

ವಿವಿಧೆಡೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಭೇಟಿ: ರೈತರೊಂದಿಗೆ ಚರ್ಚೆ
|

ವಿವಿಧೆಡೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಭೇಟಿ: ರೈತರೊಂದಿಗೆ ಚರ್ಚೆ

ಕೊಪ್ಪಳ.18.ಜುಲೈ.25: ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಗುರುವಾರ ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮಗಳ ಹಣ್ಣು ಬೆಳೆಗಳ ಸಂಸ್ಕರಣ ಘಟಕಗಳು, ಕೃಷಿ ಹೊಂಡ ಮತ್ತು ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗಳ ವೀಕ್ಷಣೆ ಮಾಡಿ ರೈತರೊಂದಿಗೆ ಚರ್ಚಿಸಿದರು. ಕೊಪ್ಪಳ ತಾಲ್ಲೂಕಿನ ಮೆತಗಲ್ ಗ್ರಾಮದಲ್ಲಿ ನಬಾರ್ಡ ವತಿಯಿಂದ ನಿರ್ಮಿಸುತ್ತಿರುವ ಹಣ್ಣು ಬೆಳೆಗಳ ಸಂಸ್ಕರಣ ಘಟಕಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಂತರ ಯಲಬುರ್ಗಾ ತಾಲ್ಲೂಕಿನ ಮಾಟಲದಿನ್ನಿ ಗ್ರಾಮದ ರೈತರ ಕೃಷಿ ಭಾಗ್ಯ ಯೋಜನೆ, ಉದ್ಯೋಗ ಖಾತ್ರಿ ಯೋಜನೆ…

ಬಾಲ್ಯವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ
|

ಬಾಲ್ಯವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ

ಕೊಪ್ಪಳ.18.ಜುಲೈ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಅಧಿಕಾರಿಗಳ ಕಛೇರಿ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ ಗಂಗಾವತಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇಸ್ಲಾಂಪೂರ-ಗoಗಾವತಿ ಇವರ ಸಂಯುಕ್ತಾಶ್ರಯದಲ್ಲಿ ಗಂಗಾವತಿಯ ಜಯನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಜುಲೈ 15 ರಂದು ಬಾಲ್ಯವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗಾವತಿಯ ಡಾ.ವಿನೋದ ಅವರು ಮಾತನಾಡಿ, ಬಾಲ್ಯ ವಿವಾಹ ನಮ್ಮ ಸಮಾಜದ ಒಂದು ಸವಾಲಾಗಿದೆ. ಇದರ ಬಗ್ಗೆ…

ಹಳಿಯಾಳ ಆರ್‌ಸೆಟಿ ಸಂಸ್ಥೆ: ತರಬೇತಿಗೆ ಅರ್ಜಿ ಆಹ್ವಾನ
|

ಹಳಿಯಾಳ ಆರ್‌ಸೆಟಿ ಸಂಸ್ಥೆ: ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ ಜುಲೈ.25: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿoದ ಉಚಿತವಾಗಿ ಜೂಟ್ ಬ್ಯಾಗ್ ತಯಾರಿಕೆ ಹಾಗೂ ಮಹಿಳೆಯರಿಗಾಗಿ ಹೊಲಿಗೆ ಮತ್ತು ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ಕುರಿತು ಉಚಿತ ತರಬೇತಿಯನ್ನು ನೀಡುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಜುಲೈ ತಿಂಗಳಲ್ಲಿ ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಹಾಗೂ ಆಗಸ್ಟ್ ತಿಂಗಳಲ್ಲಿ ಮಹಿಳೆಯರಿಗಾಗಿ ಹೊಲಿಗೆ ಮತ್ತು…

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ.
|

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ.

ಕೊಪ್ಪಳ.18.ಜುಲೈ.25: ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ನಿವಾಸಿ ಹುಸೇನಪ್ಪ ತಂದೆ ಯಮನಪ್ಪ ಈಳಿಗೇರ ಎಂಬ 82 ವರ್ಷದ ವ್ಯಕ್ತಿಯು 2025 ರ ಮಾರ್ಚ್ 26 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 75/2025 ಕಲಂ: ಮನುಷ್ಯ ಕಾಣೆ ನೇದ್ದರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ: ವ್ಯಕ್ತಿಯು 5.5 ಅಡಿ ಎತ್ತರವಿದ್ದು, ಸಾಧಾರಣ ಮೈಕಟ್ಟು, ಸಾದಗಪ್ಪು ಮೈಬಣ್ಣ ಹಾಗೂ ತಲೆಯಲ್ಲಿ ಬಿಳಿಯ ಕೂದಲುಗಳಿವೆ. ಏರು ಹಣೆ,…

ಹತ್ತಿ ಬೆಳೆಯ ಪ್ರಮುಖ ಕೀಟಗಳ ಸಮಗ್ರ ನಿರ್ವಹಣೆ: ರೈತರಿಗೆ ಸಲಹೆ.
|

ಹತ್ತಿ ಬೆಳೆಯ ಪ್ರಮುಖ ಕೀಟಗಳ ಸಮಗ್ರ ನಿರ್ವಹಣೆ: ರೈತರಿಗೆ ಸಲಹೆ.

ಕೊಪ್ಪಳ.18.ಜುಲೈ.25: ಹತ್ತಿ ಬೆಳೆಯಲ್ಲಿ ಕಂಡುಬರುವ ಪ್ರಮುಖ ಕೀಟಗಳಾದ ಮಿರಿಡ್ ತಿಗಣೆ, ಥ್ರೀಪ್ಸ್, ಹಿಟ್ಟು ತಿಗಣೆ, ಹಸಿರು ಜಿಗಿಹುಳು, ಬಿಳಿನೊಣ, ಗುಲಾಬಿ ಕಾಯಿಕೊರಕದ ಸಮಗ್ರ ನಿರ್ವಹಣಾ ಕ್ರಮಗಳ ಕುರಿತು ಕೃಷಿ ಇಲಾಖೆಯಿಂದ ರೈತರಿಗೆ ಸಲಹೆಗಳನ್ನು ನೀಡಲಾಗಿದೆ. ಹತೋಟಿ ಕ್ರಮಗಳು: ಹತ್ತಿ ಬೆಳೆಯಲ್ಲಿ ಕಂಡುಬರುವ ಪ್ರಮುಖ ಕೀಟಗಳ ಹತೋಟಿಗಾಗಿ ರೈತರು ಬೇಸಿಗೆಯಲ್ಲಿ ಆಳವಾಗಿ ಉಳುಮೆ ಮಾಡುವುದು. ಹತ್ತಿ ಬೆಳೆಯ ಅವಧಿ ಮುಗಿದ ನಂತರ ಗಿಡಗಳನ್ನು ಟ್ಯಾಕ್ಟರ್ ಚಾಲಿತ ಕೇಡರ್ನಿಂದ ಕಿತ್ತು ಪುಡಿ ಮಾಡಿ ಸೇರಿಸುವುದು. ಬಾದೆಗೊಳಗಾದ ಕಾಯಿಗಳನ್ನು ಹತ್ತಿ ಗಿಡದಿಂದ…

ಕುಕನೂರು, ಗಂಗಾವತಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ: ಜು. 24ರಂದು ಶುಶ್ರೂಷಕ ಅಧಿಕಾರಿಗಳ ಹುದ್ದೆಗೆ ದಾಖಲಾತಿ ಪರಿಶೀಲನೆ
|

ಕುಕನೂರು, ಗಂಗಾವತಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ: ಜು. 24ರಂದು ಶುಶ್ರೂಷಕ ಅಧಿಕಾರಿಗಳ ಹುದ್ದೆಗೆ ದಾಖಲಾತಿ ಪರಿಶೀಲನೆ

ಕೊಪ್ಪಳ.18.ಜುಲೈ.25: ಕೊಪ್ಪಳ ಜಿಲ್ಲೆಯ ಕುಕನೂರು ಹಾಗೂ ಗಂಗಾವತಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕ ಅಧಿಕಾರಿಗಳ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ದಾಖಲಾತಿ ಪರಿಶೀಲನೆಯು ಜುಲೈ 24ರಂದು ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು ಅವರು ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕುಕನೂರು ಹಾಗೂ ಗಂಗಾವತಿಯಲ್ಲಿ ಖಾಲಿ ಇರುವ ಶುಶ್ರೂಷಕ ಅಧಿಕಾರಿಗಳ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ…