ರಾಜ್ಯ ಸರ್ಕಾರ  7 IPS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ
|

ರಾಜ್ಯ ಸರ್ಕಾರ  7 IPS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು.18.ಜುಲೈ.25:- ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜಿ ಮಾಡಿದ್ದು, ಮತ್ತೆ 7 ಐಪಿಎಸ್ IPS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.

ರಾಜ್ಯದ ಶಾಲೆಗಳಲ್ಲಿ ‘ಸಹ ಪಂಕ್ತಿ ಭೋಜನ ವ್ಯವಸ್ಥೆ’ : ಶಿಕ್ಷಣ ಇಲಾಖೆ ಆದೇಶ.!
|

ರಾಜ್ಯದ ಶಾಲೆಗಳಲ್ಲಿ ‘ಸಹ ಪಂಕ್ತಿ ಭೋಜನ ವ್ಯವಸ್ಥೆ’ : ಶಿಕ್ಷಣ ಇಲಾಖೆ ಆದೇಶ.!

ಬೆಂಗಳೂರು.18.ಜುಲೈ.25:-  ರಾಜ್ಯದ ಶಾಲೆಗಳಲ್ಲಿ ಸಹ ಪಂಕ್ತಿ ಭೋಜನ ವ್ಯವಸ್ಥೆ ಪಾಲಿಸುವ ಕುರಿತು ಶಿಕ್ಷಣ ಇಲಾಖೆ ವತಿಯಿಂದ ಆದೇಶ ಹೊರಡಿಸಿದೆ. ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ಪಿ.ಎಂ.ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆಯನ್ನು ಅನುಷ್ಠಾನ ಮಾಡುವ ಸಂದರ್ಭದಲ್ಲಿ ಸರ್ಕಾರದ SOP ಮಾರ್ಗಸೂಚಿಗಳನ್ನು ಪಾಲಿಸುವಂತೆ ಅನೇಕ ಬಾರಿ ತಿಳಿಸಿದಾಗ್ಯೂ ಶಾಲಾ ಸಂದರ್ಶನ ಸಮಯದಲ್ಲಿ ಮಕ್ಕಳನ್ನು ಸಹ ಪಂಕ್ತಿಯಲ್ಲಿ ಕುಳ್ಳಿರಿಸದೇ ಇರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಉಲ್ಲೇಖಿತ ಆದೇಶವನ್ನು ಈ ಪತ್ರಕ್ಕೆ ಲಗತ್ತಿಸಿದೆ, ಸರ್ಕಾರ/ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ…

ರಾಜ್ಯದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ವಾರದ 6 ದಿನವೂ ಮೊಟ್ಟೆ, ಬಾಳೆಹಣ್ಣು’ ವಿತರಣೆ : ಶಿಕ್ಷಣ ಇಲಾಖೆ ಆದೇಶ
|

ರಾಜ್ಯದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ವಾರದ 6 ದಿನವೂ ಮೊಟ್ಟೆ, ಬಾಳೆಹಣ್ಣು’ ವಿತರಣೆ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು.18.ಜುಲೈ.25:- 2024-25 ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ನೀಡಿರುವ ಸುತ್ತೋಲೆಯಂತೆ ವಾರದ ಆರು ದಿನಗಳಂದು ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರವನ್ನು ಸಮರ್ಪಕವಾಗಿ ವಿತರಿಸದೇ, ತಮ್ಮದೇ ಆದ ವಿಧಾನವನ್ನು ಅನುಸರಿಸಿರುವ ಶಾಲಾ ಎಸ್.ಡಿ.ಎಂ.ಸಿ.ರವರಿಗೆ ಸೂಕ್ತ ತಿಳುವಳಿಕೆ ನೀಡುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಹಾಗೂ ಉಲ್ಲೇಖಿತ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಿರುವಂತೆ, 2024-25ನೇ ಸಾಲಿನಿಂದ ಸೆಪ್ಟೆಂಬರ್ 2024 ರಿಂದ ಉಲ್ಲೇಖಿತ (1)ರ ಶಾಲಾ ಶಿಕ್ಷಣ ಇಲಾಖೆಯ ಸುತ್ತೋಲೆಯಂತೆ ಅನುಷ್ಠಾನಗೊಳಿಸಿರುವಂತೆ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು…

ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ 21’ರಂದು ಪ್ರತಿಭಟನೆ.
|

ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ 21’ರಂದು ಪ್ರತಿಭಟನೆ.

ಬೆಂಗಳೂರು.18.ಜುಲೈ.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವುದರ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜುಲೈ 21ರಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ತಿಳಿಸಿದೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಹನಮಂತಗೌಡ ಆರ್. ಕಲ್ಮನಿ, ‘ವರ್ಷದ 12 ತಿಂಗಳ ವೇತನ ನೀಡಬೇಕು. ಪ್ರಸಕ್ತ ಶೈಕ್ಷಣಿಕ ಸಾಲಿಗೆ ನೇಮಕಾತಿ ಮಾಡಿಕೊಳ್ಳುವ…

ಮದುವೆಯಾಗುವ ಆಮಿಷ ತೋರಿಸಿ ಲೈಂಗಿಕ ದುರ್ಬಳಕೆ – ಬಿಜೆಪಿ ಶಾಸಕ ಪ್ರಭು ಚೌಹಾಣ್‌ ಪುತ್ರನ ವಿರುದ್ಧ ದೂರು!
|

ಮದುವೆಯಾಗುವ ಆಮಿಷ ತೋರಿಸಿ ಲೈಂಗಿಕ ದುರ್ಬಳಕೆ – ಬಿಜೆಪಿ ಶಾಸಕ ಪ್ರಭು ಚೌಹಾಣ್‌ ಪುತ್ರನ ವಿರುದ್ಧ ದೂರು!

ಪ್ರಭು ಚೌಹಾಣ್ ಅವರ ಪುತ್ರ ಪ್ರತೀಕ್ ಚೌಹಾಣ್ ಎಂಬಾತ ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಬಳಿಕ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದು, ಈ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಮಗ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿದ ಬೆನ್ನಲ್ಲೇ ಇದೀಗ ವಿರುದ್ಧ ದೂರು ದಾಖಲಾಗಿದೆ.ಔರಾದ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಪ್ರಭು ಚೌಹಾಣ್ ವಿರುದ್ಧ ಕೂಡ…

ಬೀದರ್ ಅಪರ ಜಿಲ್ಲಾಧಿಕಾರಿ ಡಾ.ಈಶ್ವರ್ ಉಳ್ಳಾಗಡ್ಡಿ ವರ್ಗಾವಣೆ
|

ಬೀದರ್ ಅಪರ ಜಿಲ್ಲಾಧಿಕಾರಿ ಡಾ.ಈಶ್ವರ್ ಉಳ್ಳಾಗಡ್ಡಿ ವರ್ಗಾವಣೆ

ಬೀದರ.18.ಜುಲೈ.25:- ಇತ್ತೀಚಿಗೆ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಡಾ.ಈಶ್ವರ್ ಉಳ್ಳಾಗಡ್ಡಿ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೋರಡಿಸಿದೆ. ಜೂ.27ರಂದು ಬೀದರ್ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಡಾ.ಈಶ್ವರ್ ಉಳ್ಳಾಗಡ್ಡಿ ಅವರು ಅಧಿಕಾರ ಸ್ವೀಕರಿಸಿದ್ದರು. ಇದೀಗ ಅವರನ್ನು ಧಾರವಾಡ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರನ್ನಾಗಿ ನೇಮಿಸಿ, ಸರಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಎಚ್ ಅವರು ಆದೇಶ ಹೋರಡಿಸಿದ್ದಾರೆ.