ಗೃಹ ಆರೋಗ್ಯ ಯೋಜನೆ ಪರಿಣಾಮಕಾರಿಯಾಗಿ
ಅನುಷ್ಠಾನಕ್ಕೆ ತರಬೇಕು- ಸಚಿವ ಈಶ್ವರ ಬಿ. ಖಂಡ್ರೆ
ಬೀದರ.19.ಜುಲೈ.25.:- ಮನೆ ಬಾಗಿಲಲ್ಲಿಯೇ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ತಿಳಿಸಿದರು.ಅವರು ಶುಕ್ರವಾರ ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಲ್ಲಾ ಅಸಾಂಕ್ರಮಿಕ ನಿಯಂತ್ರಣ ಕೋಶ ಇವರ ಸಹಯೋಗದಲ್ಲಿ ನಡೆದ ಗೃಹ ಆರೋಗ್ಯ ಯೋಜನೆ…