ಪ್ರಧಾನಿ ಮೋದಿ ಮತ್ತು ಸಿ ಎಂ ಯೋಗಿ ಭೇಟಿ,
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಶ್ರೀ ಆದಿತ್ಯನಾಥ್ ತಮ್ಮ ಭೇಟಿಯನ್ನು ಸಂತೋಷಕರವೆಂದು ಬಣ್ಣಿಸಿದ್ದಾರೆ. ಶ್ರೀ ಮೋದಿ ವಿಶ್ವದ ಅತ್ಯಂತ ಜನಪ್ರಿಯ ಪ್ರಧಾನಿ ಎಂದು ಅವರು ಹೇಳಿದರು. ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಯವರ ಮಾರ್ಗದರ್ಶನಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ಇದಕ್ಕೂ ಮೊದಲು, ಶ್ರೀ ಆದಿತ್ಯನಾಥ್ ಅವರು ಇಂದು ರಾಷ್ಟ್ರ ರಾಜಧಾನಿಯಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿಯಾದರು.