ಬೀದರ ಜಿಲ್ಲೆಯನ್ನು ಭಿಕ್ಷಾಟನೆ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಸಹಕರಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ.22.ಜುಲೈ.25:- ಜಿಲ್ಲೆಯ ಸಾರ್ವಜನಿಕರು ಭಿಕ್ಷೆ ಬೇಡುತ್ತಿರುವವರು ಕಂಡು ಬಂದರೆ ಅವರಿಗೆ ಭಿಕ್ಷೆ ನೀಡಿ ಪ್ರೋತ್ಸಾಹಿಸದೇ ಅದನ್ನು ಬಹಿಷ್ಕರಿಸಿ, ಬೀದರ ಜಿಲ್ಲೆಯನ್ನು “ಭಿಕ್ಷಾಟನೆ ಮುಕ್ತ” ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಭಿಕ್ಷೆ ಬೇಡುತ್ತಿರುವವರು ಕಂಡು ಬಂದರೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅಥವಾ ಟೋಲ್ ಫ್ರೀ ಸಂಖ್ಯೆ 10581 ಮತ್ತು ಸಹಾಯವಾಣಿ ಸಂಖ್ಯೆ: 9482300400, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ…