ಹಾಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರೆಸಿ- ಕೆ.ವಿವೇಕಾನಂದ ಮನವಿ
ಮೈಸೂರು.24.ಜುಲೈ,2025 ನ್ಯಾಯಾಲಯದಲ್ಲಿ ವ್ಯಾಜ್ಯ ಮುಗಿಯುವವರೆಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರೆಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರಿಗೆ ವಿಧಾನಪರಿಷತ್ ಸದಸ್ಯ ಕೆ.ವಿವೇಕಾನಂದ ಮನವಿ ಮಾಡಿದ್ದಾರೆ. ಈ ಕುರಿತು ಸಚಿವ ಎಂ.ಸಿ ಸುಧಾಕರ್ ಅವರಿಗೆ ಪತ್ರ ಬರೆದಿರುವ ಎಂಎಲ್ ಸಿ ವಿವೇಕಾನಂದ, ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವಾ ಅವಧಿ ದಿನಾಂಕ:-2/8/2025 ರಂದು ಮುಗಿಯಲ್ಲಿದೆ. ಏಕ ಕಾಲದಲ್ಲಿ ಸರಿ…