ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಭಾರದು- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ
ಕೊಪ್ಪಳ.24.ಜುಲೈ .25: ಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರ ಅಂಗಡಿಗಳ ಮಾಲೀಕರು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮತ್ತು ಅನಧಿಕೃತವಾಗಿ ರಸಗೊಬ್ಬರ ದಾಸ್ತಾನು ಮಾಡಬಾರದು ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ರಸಗೊಬ್ಬರ ತೈಯಾರಕ ಕಂಪನಿಯ ಮಾರ್ಕೆಟಿಂಗ್ ಅಧಿಕಾರಿಗಳು, ಕರ್ನಾಟಕ ಮಾರ್ಕೆಟಿಂಗ್ ಫೆಡರೇಶನ್ ಮತ್ತು ಕರ್ನಾಟಕ ರಾಜ್ಯ ಬೀಜ ನಿಗಮದ ಅಧಿಕಾರಿಗಳು ಹಾಗೂ ರಸಗೊಬ್ಬರ, ಕೀಟನಾಶಕಗಳ ಮಾರಾಟಗಾರರ ಸಂಘದ ಅಧ್ಯಕ್ಷರಿಗೆ ಕರೆದ ಸಭೆಯಲ್ಲಿ ಮಾತನಾಡಿದರು. ರಸಗೊಬ್ಬರದ ಜೊತೆಗೆ ಜೈವಿಕ ಉತ್ತೇಜಕಗಳು, ಕೀಟನಾಶಕ…