ಜುಲೈ 27ಕ್ಕೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಜಿಲ್ಲಾ ಪ್ರವಾಸ.
ರಾಯಚೂರು.25.ಜುಲೈ.25: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್. ಪಾಟೀಲ ಅವರು ಜುಲೈ 27ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಿಗ್ಗೆ 8 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಲಿಂಗಸುಗೂರಿಗೆ ಆಗಮಿಸಿ ಬೆಳಿಗ್ಗೆ 11 ಗಂಟೆಗೆ ಲಿಂಗಸುಗೂರು ಪಟ್ಟಣದ ವಿಜಯಮಹಾಂತೇಶ್ವರ ಶಾಖಾ ಮಠದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ರಾಯಚೂರು ಹಾಗೂ ವಾರ್ತಾ ಮತ್ತು ಸಂಪರ್ಕ ಇಲಾಖೆ ರಾಯಚೂರು ಇವರ…