ಹಟ್ಟಿ ಚಿನ್ನದ ಗಣಿ ಪ್ರದೇಶದಲ್ಲಿ 998 ಕೋಟಿ ರೂ. ವೆಚ್ಚದ ಅಭಿವೃದ್ದಿಕಾಮಗಾರಿಗೆ ಮುಖ್ಯಮಂತ್ರಿಗಳಿoದ ಆಗಸ್ಟ್ 6ರಂದು ಶಂಕುಸ್ಥಾಪನೆ
|

ಹಟ್ಟಿ ಚಿನ್ನದ ಗಣಿ ಪ್ರದೇಶದಲ್ಲಿ 998 ಕೋಟಿ ರೂ. ವೆಚ್ಚದ ಅಭಿವೃದ್ದಿಕಾಮಗಾರಿಗೆ ಮುಖ್ಯಮಂತ್ರಿಗಳಿoದ ಆಗಸ್ಟ್ 6ರಂದು ಶಂಕುಸ್ಥಾಪನೆ

ರಾಯಚೂರು.30.ಜುಲೈ 25:- ಅಂದಾಜು 998 ಕೋಟಿ ರೂ ವೆಚ್ಚದಲ್ಲಿ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕರ ಹೊಸ ವಸತಿ ಸಮುಚ್ಛಯ ನಿರ್ಮಾಣ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ಹಟ್ಟಿ ಚಿನ್ನದ ಗಣಿ ಪ್ರದೇಶದಲ್ಲಿ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ ಎಂದು ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ. ಪಾಟೀಲ ಅವರು ಹೇಳಿದರು. ಲಿಂಗಸುಗೂರು ತಾಲೂಕಿನ ಹಟ್ಟಿಯ ಚಿನ್ನದ ಗಣಿ ಕಂಪನಿಯ…

ರಾಯಚೂರು | ಇಂದು ವಿವಿಧ ಜಯಂತಿಗಳ ಪೂರ್ವಭಾವಿ ಸಭೆ
|

ರಾಯಚೂರು | ಇಂದು ವಿವಿಧ ಜಯಂತಿಗಳ ಪೂರ್ವಭಾವಿ ಸಭೆ

ರಾಯಚೂರು.30.ಜುಲೈ 25:- ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 09 ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಆಗಸ್ಟ್ 16 ರಂದು ಶ್ರೀಕೃಷ್ಣ್ಣ ಜಯಂತಿ ನಡೆಯಲಿವೆ. ಈ ಜಯಂತಿ ಅಂಗವಾಗಿ ಜುಲೈ 30ರ ಬೆಳಿಗ್ಗೆ 11.30 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಬಹುದಾಗಿದೆ.ಅಂದು ನಡೆಯುವ ಪೂರ್ವಭಾವಿ ಸಭೆಗೆ ಸಂಬoಧಿಸಿದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಸಮಾಜದ…

ವಿಶ್ವ ಹೆಪಟೈಟಿಸ್ ದಿನಾಚರಣೆಜೀವನ ಶೈಲಿ ಬದಲಾವಣೆಯಿಂದ ರೋಗ ದೂರ ಮಾಡಿ: ಡಾ.ಸುರೇಂದ್ರ ಬಾಬು

ವಿಶ್ವ ಹೆಪಟೈಟಿಸ್ ದಿನಾಚರಣೆ
ಜೀವನ ಶೈಲಿ ಬದಲಾವಣೆಯಿಂದ ರೋಗ ದೂರ ಮಾಡಿ: ಡಾ.ಸುರೇಂದ್ರ ಬಾಬು

ರಾಯಚೂರು.30.ಜುಲೈ 25: ಜೀವನ ಶೈಲಿಯ ಮತ್ತು ವರ್ತನೆಯ ಬದಲಾವಣೆಯಿಂದ ಅರಿವು ಮೂಡಿಸುವುದರ ಮೂಲಕ ಯಕೃತ್‌ನ ಆರೈಕೆಯನ್ನು ನಾವೆಲ್ಲರೂ ಮಾಡಬೇಕಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಸುರೇಂದ್ರ ಬಾಬು ಅವರು ಹೇಳಿದರು. ಜುಲೈ 28ರ ಸೋಮವಾರ ದಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ವಿಭಾಗ, ರಾಷ್ಟಿçÃಯ ಹೆಪಟೈಟಿಸ್ ನಿಯಂತ್ರಣ…

ಮುಖ್ಯಮಂತ್ರಿಗಳ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲಿ: ಚಿನ್ನದ ಗಣಿ ಕಂಪನಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ್
|

ಮುಖ್ಯಮಂತ್ರಿಗಳ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲಿ: ಚಿನ್ನದ ಗಣಿ ಕಂಪನಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ್

ರಾಯಚೂರು.30.ಜುಲೈ.25: ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕರ ಹೊಸ ವಸತಿ ಸಮುಚ್ಚಯ ನಿರ್ಮಾಣದ ಶಂಕುಸ್ಥಾಪನೆಗೆ ಆಗಸ್ಟ 6ರಂದು ರಾಯಚೂರು ಜಿಲ್ಲೆಗೆ ಆಗಮಿಸಲಿರುವ ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಅಧ್ಯಕ್ಷರು ಆಗಿರುವ ಶಾಸಕರಾದ ಜೆ.ಟಿ. ಪಾಟೀಲ್ ಅವರು ಹೇಳಿದರು. ಲಿಂಗಸೂರ ತಾಲೂಕಿನ ಹಟ್ಟಿಯಲ್ಲಿನ ಚಿನ್ನದ ಗಣಿ ಕಂಪನಿಯ ಸಭಾಂಗಣದಲ್ಲಿ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕರ ಹೊಸ ವಸತಿ ಸಮುಚ್ಚಯ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮದ…

ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವ ಅಂಗಡಿಗಳ ಪರವಾಗಿ ರದ್ದು- ಸಚಿವ ಶಿವರಾಜ್ ಎಸ್. ತಂಗಡಗಿ
|

ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವ ಅಂಗಡಿಗಳ ಪರವಾಗಿ ರದ್ದು- ಸಚಿವ ಶಿವರಾಜ್ ಎಸ್. ತಂಗಡಗಿ

ಕೊಪ್ಪಳ.30ಜುಲೈ 25: ಕೊಪ್ಪಳ ಜಿಲ್ಲೆಯಲ್ಲಿ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವುದು ಕಂಡು ಬಂದರೆ ಅಂತಹ ರಸಗೊಬ್ಬರ ಅಂಗಡಿಗಳ ಪರವಾನಗಿ ರದ್ದು ಪಡಿಸುವುದರ ಜೊತೆಗೆ ಕ್ರಿಮೀನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಹೇಳಿದರು. ಅವರು ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯ ರಸಗೊಬ್ಬರ ಮಾರಾಟಗಾರರಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು. ರಸಗೊಬ್ಬರ ಮಾರಾಟಗಾರರು…

ರೈತ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡಿ- ಸಚಿವ ಶಿವರಾಜ ತಂಗಡಗಿ
|

ರೈತ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡಿ- ಸಚಿವ ಶಿವರಾಜ ತಂಗಡಗಿ

ಕೊಪ್ಪಳ.30.ಜುಲೈ 25: ರಸಗೊಬ್ಬರವನ್ನು ಮಾರಾಟಕ್ಕಾಗಿ ಒಂದೇ ಕಂಪನಿ ಅಥವಾ ಎಜೆನ್ಸಿಯವರಿಗೆ ನೀಡಿದರೆ, ರೈತರಿಗೆ ಖರೀಸಲು ಸಮಸ್ಯೆಯುಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ರೈತರ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರ ಪೂರೈಕೆಯ…

ಕೆಸ್ತೂರು ಹಾಲು ಉತ್ಪಾದಕ ಸಂಘದ ಅಧ್ಯಕ್ಷರಾಗಿ ಸಿದ್ದರಾಜು ಬಿ, ಉಪಾಧ್ಯಕ್ಷೆ ಲಲಿತಮ್ಮ ರವರು ಅವಿರೋಧ ಆಯ್ಕೆ.
|

ಕೆಸ್ತೂರು ಹಾಲು ಉತ್ಪಾದಕ ಸಂಘದ ಅಧ್ಯಕ್ಷರಾಗಿ ಸಿದ್ದರಾಜು ಬಿ, ಉಪಾಧ್ಯಕ್ಷೆ ಲಲಿತಮ್ಮ ರವರು ಅವಿರೋಧ ಆಯ್ಕೆ.

ಯಳಂದೂರು.30.ಜುಲೈ.25:- ತಾಲ್ಲೂಕಿನ ಕೆಸ್ತೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮಂಗಳವಾರ ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ಸಿದ್ದರಾಜು ಬಿ ರವರು ಉಪಾಧ್ಯಕ್ಷರಾಗಿ ಲಲಿತಮ್ಮರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಬಿ ಸಿದ್ದರಾಜು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಲಲಿತಮ್ಮ ರವರು ಮಾತ್ರ ನಾಮಪತ್ರ ಸಲ್ಲಿಸಿದರು ಇವರ ಪ್ರತಿಸ್ಪರ್ಧಿಗಳು ಯಾರು ನಾಮಪತ್ರ ಸಲ್ಲಿಸಿದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು. ನೂತನ ಅಧ್ಯಕ್ಷ ಬಿ ಸಿದ್ದರಾಜು ಮಾತನಾಡಿ. ಕೆಸ್ತೂರು ಹಾಲು ಉತ್ಪಾದಕರ ಸಂಘವನ್ನು ಎಲ್ಲಾ ನಿರ್ದೇಶಕರ ಸಲಹೆಯ…