ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನರ್, ಗ್ರೂಪ್-ಸಿ, ಆರ್‌ಆರ್‌ಬಿ ಮತ್ತು ಎಸ್‌ಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು. ಸದರಿ ತರಬೇತಿಗೆ ಅಭ್ಯರ್ಥಿಗಳಿಂದ sಸೇವಾಸಿಂಧು ಪೋರ್ಟಲ್ (https://sevasindhu.karnataka.gov.in) ಮೂಲಕ ಅನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: 11-08-2025 ರವರೆಗೆ ವಿಸ್ತರಿಸಲಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.