ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು ನಿಗದಿಪಡಿಸಿರುವ ವಿದ್ಯಾರ್ಹತೆಯ ಅನುಗುಣವಾಗಿ ನೇಮಕಾತಿ ನಡೆಯಲಿದೆ. ತರಗತಿಗಳು ಶೈಕ್ಷಣಿಕ ಹಿತದೃಷ್ಟಿಯಿಂದ ಲಭ್ಯವಿರುವ ಕಾರ್ಯಭಾರಕ್ಕೆ ತಕ್ಕಂತೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಲಿದೆ. ಕರ್ನಾಟಕ ಹೈಕೋರ್ಟ್‌ನ ಇತ್ತೀಚಿನ ತೀರ್ಪು ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಯುಜಿಸಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದೆ. ಈ ತೀರ್ಪಿನಿಂದಾಗಿ ಸಾವಿರಾರು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಏಕೆಂದರೆ, ಹಲವು ಅತಿಥಿ ಉಪನ್ಯಾಸಕರು…