ಸಾರ್ವಜನಿಕರ ಪ್ರಾಯಾಣಕ್ಕೆ ತೊಂದರೆಯಾಗದಿರಲಿ- ಜಿಲ್ಲಾಧಿಕಾರಿ ಸುರೇಶ ಇಟ್ನಾಳ
|

ಸಾರ್ವಜನಿಕರ ಪ್ರಾಯಾಣಕ್ಕೆ ತೊಂದರೆಯಾಗದಿರಲಿ- ಜಿಲ್ಲಾಧಿಕಾರಿ ಸುರೇಶ ಇಟ್ನಾಳ

ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಶನಿವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಾರಿಗೆ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗದ ಅಧಿಕಾರಿಗಳು ಮತ್ತು ಖಾಸಗಿ ವಾಹನ ಚಾಲಕರ ಅಸೋಶಿಯೆಷನ್ ಅವರೊಂದಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು…

ಜವಾಹರ ನವೋದಯ ವಿದ್ಯಾಲಯದಲ್ಲಿ ಪಿಯುಸಿಗೆ ಪ್ರವೇಶ ಆರಂಭ
|

ಜವಾಹರ ನವೋದಯ ವಿದ್ಯಾಲಯದಲ್ಲಿ ಪಿಯುಸಿಗೆ ಪ್ರವೇಶ ಆರಂಭ

ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.ರಾಯಚೂರ ಜಿಲ್ಲೆಯ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಆಗಸ್ಟ್ 10ರ ಬುಧವಾರ ಸಂಜೆ 4.30 ರೊಳಗೆ ವಿದ್ಯಾಲಯಕ್ಕೆ ಬಂದು ಪ್ರವೇಶ ಪಡೆಯಬಹುದು. ಪ್ರವೇಶಕ್ಕೆ ಯಾವುದೇ ಶುಲ್ಕ ಇರುವದಿಲ್ಲ. ವಿದ್ಯಾಲಯಕ್ಕೆ ಬರುವಾಗ ವಿದ್ಯಾರ್ಥಿಗಳು 10ನೇ ತರಗತಿಯ ಅಂಕಪಟ್ಟಿ, ಆಧಾರ್ ಕಾರ್ಡ್ ಮತ್ತು ವಿದ್ಯಾರ್ಥಿಯ ಪೋಟೊಗಳು ತೆಗೆದುಕೊಂಡು ಬಂದು ಪ್ರವೇಶ ಪಡೆಯಲು ತಿಳಿಸಲಾಗಿದೆ. ಅಥವಾ  https://docs.google.com/forms/d/e/1FAIpQLSe3FxTplR_g9sHWaarhwdY6d2PUQOVM9nHqS2WKud4B8P72RA/viewform?usp=header          ಲಿಂಕ್ ಬಳಸಿ…

ಒಪೆಕ್ ಆಸ್ಪತ್ರೆಯಲ್ಲಿನ ಹೊರಗುತ್ತಿಗೆ ನೇಮಕಾತಿ ಪ್ರಕ್ರಿಯೆ ನ್ಯಾಯಾಲಯ ಆದೇಶದಂತೆ ಮುಂದೂಡಿಕೆ
|

ಒಪೆಕ್ ಆಸ್ಪತ್ರೆಯಲ್ಲಿನ ಹೊರಗುತ್ತಿಗೆ ನೇಮಕಾತಿ ಪ್ರಕ್ರಿಯೆ ನ್ಯಾಯಾಲಯ ಆದೇಶದಂತೆ ಮುಂದೂಡಿಕೆ

ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಮಾನ್ಯ ಉಚ್ಛ ನ್ಯಾಯಾಲಯ ಕಲಬುರಗಿಯಲ್ಲಿರುವ ಪ್ರಕರಣ ಸಂಖ್ಯೆ ಡಬ್ಲುö್ಪಿ:200099/2024 (WP: 200099/2024) ಕಾರಣದಿಂದಾಗಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಈ ಹಿಂದೆ ದಿನಾಂಕ 18.07.2025 ಮತ್ತು 01.08.2025 ಹೊರಡಿಸಿದ ತಿದ್ದುಪಡಿಯ ಅರ್ಜಿ ಆಹ್ವಾನವನ್ನು ಮಾನ್ಯ ಉಚ್ಛ ನ್ಯಾಯಾಲಯ ಕಲಬುರಗಿ ಮುಂದಿನ ಆದೇಶ ಬರುವವರೆಗೆ ಮುಂದೂಡಲಾಗಿದೆ…

ಆಗಸ್ಟ್ 7ರಂದು ಗೌರಿ ಗಣೇಶ ಹಬ್ಬದ ಪೂರ್ವಭಾವಿ ಸಭೆ
|

ಆಗಸ್ಟ್ 7ರಂದು ಗೌರಿ ಗಣೇಶ ಹಬ್ಬದ ಪೂರ್ವಭಾವಿ ಸಭೆ

ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ ಸಂಜೆ 04.30ಕ್ಕೆ ನೂತನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಗೆ ಹಾಜರಾಗಲು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಸಕರಾದ ಬಸನಗೌಡ ದದ್ಧಲ್ ಅವರಿಂದ ರಾಯಚೂರಗ್ರಾಮೀಣ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
|

ಶಾಸಕರಾದ ಬಸನಗೌಡ ದದ್ಧಲ್ ಅವರಿಂದ ರಾಯಚೂರ
ಗ್ರಾಮೀಣ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

ರಾಯಚೂರು.03.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಆಗಸ್ಟ್ 2ರಂದು ರಾಯಚೂರ ಗ್ರಾಮೀಣ ಭಾಗದಲ್ಲಿ ಪ್ರವಾಸ ಕೈಗೊಂಡರು. ರಾಯಚೂರು ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ ಮನ್ಸಲಾಪೂರ, ಚಿಕ್ಕಸೂಗೂರು ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಮನ್ಸಲಾಪೂರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೈಕ್ರೋ ಯೋಜನೆಯಡಿ ನಿರ್ಮಿಸಲು ಉದ್ದೇಶಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಅದೇ ರೀತಿ ಮುಜರಾಯಿ ಇಲಾಖೆಯ…

ಡೆಂಗೆ ವಿರೋಧಿ ಮಾಸಾಚರಣೆ ಹಿನ್ನೆಲೆ ಪಾಲಕರಿಗೆ ಕಾರ್ಯಗಾರ
|

ಡೆಂಗೆ ವಿರೋಧಿ ಮಾಸಾಚರಣೆ ಹಿನ್ನೆಲೆ ಪಾಲಕರಿಗೆ ಕಾರ್ಯಗಾರ

ರಾಯಚೂರು.03.ಆಗಸ್ಟ್.25: ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಘಟಕ ಹಾಗೂ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಹಯೋಗದೊಂದಿಗೆ ವಸತಿ ನಿಲಯ ಅಧಿಕಾರಿ ಸಿಬ್ಬಂದಿಗೆ ಡೆಂಗೆ ವಿರೋಧಿ ಮಾಸಾಚರಣೆ ಅಂಗವಾಗಿ ಒಂದು ದಿನದ ಕಾರ್ಯಗಾರ ನಡೆಯಿತು. ಕಾರ್ಯಾಗಾರಕ್ಕೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳಾದ ಡಾ.ಚಂದ್ರಶೇಖರಯ್ಯ ಸ್ವಾಮಿ ಅವರು ಸಸಿಗೆ ನೀರೆರೆದು ಉದ್ಘಾಟಿಸಿದರು. ಈ ವೇಳೆ ಅವರು ಮಾತನಾಡಿ, ಜಗತ್ತಿನಲ್ಲಿ ಹಲವಾರು ಜಾತಿಯ…

ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ: ಸ್ವಚ್ಛತೆಗಾಗಿಪಾಲಿಕೆಯ ಅಧಿಕಾರಿ, ಸಿಬ್ಬಂದಿಯ ನಿಯೋಜನೆ
|

ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ: ಸ್ವಚ್ಛತೆಗಾಗಿ
ಪಾಲಿಕೆಯ ಅಧಿಕಾರಿ, ಸಿಬ್ಬಂದಿಯ ನಿಯೋಜನೆ

ರಾಯಚೂರು.03.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಆಗಸ್ಟ್ 08 ರಿಂದ ಆಗಸ್ಟ್ 25 ರವರೆಗೆ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯಿಂದ ಸ್ವಚ್ಛತೆ ಹಾಗೂ ಕುಡಿಯುವ ನೀರು ಮತ್ತು ಮೊಬೈಲ್ ಟಾಯ್ಲೆಟ್ ವ್ಯವಸ್ಥಿತವಾಗಿ ನಿರ್ವಹಿಸಲು ಮಹಾನಗರ ಪಾಲಿಕೆಯ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಆದೇಶ ಹೊರಡಿಸಿದ್ದಾರೆ. ಆಗಸ್ಟ್ 08 ರಿಂದ ಆಗಸ್ಟ್ 25 ರವರೆಗೆ ಕೃಷಿ ವಿಶ್ವವಿದ್ಯಾಲಯದಲ್ಲಿ ಮೊಬೈಲ್ ಟಾಯ್ಲೆಟ್‌ಗಳನ್ನು ಸ್ವಚ್ಛಗೊಳಿಸಲು…

ಮಕ್ಕಳಿಗೆ ಅತ್ಯುತ್ತಮ ಸಂಪತ್ತಾದ ಶಿಕ್ಷಣ ನೀಡಿ: ಹನುಮೇಶ ರಾಗಲಪರ್ವಿ ಸಲಹೆ
|

ಮಕ್ಕಳಿಗೆ ಅತ್ಯುತ್ತಮ ಸಂಪತ್ತಾದ ಶಿಕ್ಷಣ ನೀಡಿ: ಹನುಮೇಶ ರಾಗಲಪರ್ವಿ ಸಲಹೆ

ರಾಯಚೂರು.03.ಆಗಸ್ಟ್.25: ಸಿಂಧನೂರು ತಾಲೂಕಿನ ತುರುವಿಹಾಳ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಉಪಯೋಜನೆಯಡಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕತೆ ನಿರ್ಮೂಲನೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಹಾಯಕ ಸರಕಾರಿ ಅಭಿಯೋಜಕರಾದ ಹನುಮೇಶ ರಾಗಲಪರ್ವಿ ಅವರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಶಿಕ್ಷಣ ಅತ್ಯಂತ ಪ್ರಾಮುಖ್ಯತೆ ಹೊಂದಿದೆ. ಸರಿಯಾದ ರೀತಿಯಲ್ಲಿ ಶಿಕ್ಷಣ ಪಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ. ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಜಗತ್ತಿನಲ್ಲಿ ನಿಜವಾದ ಸಂಪತ್ತು…

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.
|

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.

ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ  ಕಾಲೇಜು ಶಿಕ್ಷಣ ಇಲಾಖೆಯು ನಿಗದಿಪಡಿಸಿರುವ ವಿದ್ಯಾರ್ಹತೆಯ ಅನುಗುಣವಾಗಿ ನೇಮಕಾತಿ ನಡೆಯಲಿದೆ. ತರಗತಿಗಳು ಶೈಕ್ಷಣಿಕ ಹಿತದೃಷ್ಟಿಯಿಂದ ಲಭ್ಯವಿರುವ ಕಾರ್ಯಭಾರಕ್ಕೆ ತಕ್ಕಂತೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಲಿದೆ. ಕರ್ನಾಟಕ ಹೈಕೋರ್ಟ್‌ನ ಇತ್ತೀಚಿನ ತೀರ್ಪು ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಯುಜಿಸಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದೆ. ಈ ತೀರ್ಪಿನಿಂದಾಗಿ ಸಾವಿರಾರು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಏಕೆಂದರೆ, ಹಲವು ಅತಿಥಿ ಉಪನ್ಯಾಸಕರು…

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.
|

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿ ಮಾಡುತ್ತಿಲ್ಲ ಎಂದು ಆಕ್ರೋಶಗೊಂಡ ಮಾದಿಗ ಸಮುದಾಯದವರು ಶುಕ್ರವಾರ ಅರೆಬೆತ್ತಲೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಗತ್‌ ವೃತ್ತದಿಂದ ಹೊರಟ ಮಾದಿಗ ಸಮುದಾಯದವರ ಅರೆಬೆತ್ತಲೆ ಪ್ರತಿಭಟನಾ ಜಾಥಾ ಸರ್ದಾರ್‌ ವಲ್ಲಭಬಾಯ್‌ ವೃತ್ತ ಬಳಸಿ ಮರಳಿ ಜಿಲ್ಲಾಧಿಕಾರಿಯತ್ತ ತೆರಳಿ ನಡುರಸ್ತೆಯಲ್ಲೇ ಧರಣಿ ಕುಳಿತರು. ಈ ವೇಳೆ ಮಾತನಾಡಿದ ಮುಖಂಡರು, ‘ಆ.10ರೊಳಗೆ…