ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿ ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಶನಿವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೆಫ್-ಜಿಲ್ಲಾ ಮಕ್ಕಳ…