ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ
|

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ ಕಾನೂನುಗಳ ಕುರಿತು ಸೋಮವಾರದಂದು ಜಾಗೃತಿ ಮೂಡಿಸಲಾಯಿತು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಇಂದರಗಿ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ “ಕಾಯಂ ಜನತಾ ನ್ಯಾಯಾಲಯ ಕಾರ್ಯವಿಧಾನ ಪರಿಚಯ,…

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ
|

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ ಲಸಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಹೇಳಿದರು. ಅವರು ಶನಿವಾರ ಗಂಗಾವತಿ ನಗರ ಪ್ರದೇಶದ ಕಿಲ್ಲಾ ಏರಿಯಾದ 1ನೇ ಅಂಗನವಾಡಿ ಕೇಂದ್ರದಲ್ಲಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಇಸ್ಲಾಂಪುರ-ಗಂಗಾವತಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲ್ಲಿ…

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ
|

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಲಾಗಿದ್ದು, ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿಯನ್ನು ಆಚರಿಸಬೇಕು. ಆಗಸ್ಟ್ 27 ರಂದು ಜರುಗುವ ಗಣೇಶ ಚತುರ್ಥಿ ಪ್ರಯುಕ್ತ ನೀರಿನ ಮೂಲಗಳಲ್ಲಿ ಗಣೇಶನ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಂದರ್ಭದಲ್ಲಿ ಉಂಟಾಗುವ ಜಲಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ ಭಾಗ್ಯನಗರ ಪ.ಪಂಚಾಯತ ವತಿಯಿಂದ ಕೆಲವು ಮಾರ್ಗಸೂಚಿಯನ್ನು ಜಾರಿಗೊಸಲಾಗಿದೆ. ಮಾರ್ಗಸೂಚಿಗಳು:…

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ ವ್ಯಕ್ತಿಯು 2025 ರ ಮಾರ್ಚ್ 1 ರಿಂದ ಕಾಣೆಯಾಗಿದ್ದು, ಈ ವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಕುಷ್ಟಗಿ ಪೊಲೀಸ್ ಠಾಣಾ ಗುನ್ನೆ ನಂ: 116/2025 ಕಲಂ:00ಎಂ.ಪಿ. ಬಿ.ಎನ್.ಎಸ್-2023 ಮನುಷ್ಯ ಕಾಣೆ ನೇದ್ದರ ಅಡಿಯಲ್ಲಿ ಪ್ರಕರಣದ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯು 5.2 ಅಡಿ ಎತ್ತರವಿದ್ದು, ಸದೃಢ ಮೈಕಟ್ಟು, ಸಾದಗಪ್ಪು ಮೈಬಣ್ಣ ಹಾಗೂ ಕನ್ನಡ, ಹಿಂದಿ ಭಾಷೆ ಮಾತನಾಡುತ್ತಾರೆ….

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ
|

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಸಿ ಉಕ್ಕುಂದ ಅವರು ತಿಳಿಸಿದ್ದಾರೆ. ತೋಟಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಅನೇಕ ರೈತಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಅಲ್ಲದೇ ಸರ್ವತೋಮುಖ ಅಭಿವೃದ್ಧಿಗಾಗಿ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ-2025 ಎನ್ನುವ ಕಾರ್ಯಕ್ರಮವನ್ನು ಆಗಸ್ಟ್ 15 ರಿಂದ ಆ. 20ರ ವರೆಗೆ ಆರು ದಿನಗಳ ಕಾಲ ತೋಟಗಾರಿಕೆ ಇಲಾಖೆ ಕಛೇರಿ ಆವರಣದಲ್ಲಿ…

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್
|

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಖಾಸಗಿ ಸಂಸ್ಥೆಗಳು ಆಗಮಿಸಿ, ತಮ್ಮಲಿರುವ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ. 8ನೇ ತರಗತಿ ಮೇಲ್ಪಟ್ಟು ಅಭ್ಯರ್ಥಿಗಳಿಗೆ ನೇರ ಸಂದರ್ಶನ…

ರಾಯಚೂರ ಜಿಲ್ಲೆಯಲ್ಲಿ ಯೂರಿಯಾ’ ಡಿಎಪಿ ರಸಗೊಬ್ಬರ ಲಭ್ಯ
|

ರಾಯಚೂರ ಜಿಲ್ಲೆಯಲ್ಲಿ ಯೂರಿಯಾ’ ಡಿಎಪಿ ರಸಗೊಬ್ಬರ ಲಭ್ಯ

ರಾಯಚೂರು.05.ಆಗಸ್ಟ್.25: ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಹಂತ ಹಂತವಾಗಿ ವಿವಿಧ ಸಂಸ್ಥೆಗಳಿಂದ ಯೂರಿಯಾ, ಡಿ.ಎ.ಪಿ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರ ಜಿಲ್ಲೆಗೆ ಬರುತ್ತಿದ್ದು, ರಸಗೊಬ್ಬರದ ಕೊರತೆ ಬಗ್ಗೆ ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ‌ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ರಸಗೊಬ್ಬರ ವಿತರಕರಿಗೆ ಆಗಸ್ಟ್ 01 ರಂದು ಯೂರಿಯಾ ರಸಗೊಬ್ಬರವನ್ನು ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್-9 ಮೆಟ್ರಿಕ್ ಟನ್, ಬಂದೇನವಾಜ್ ಆ್ಯಂಡ್ ಕಂಪನಿ ಮುಳ್ಳೂರು ಕ್ಯಾಂಪ್-9 ಮೆ.ಟ., ಬಸವೇಶ್ವರ…

ವಿಶ್ವ ವಿಕಲಚೇತನರ ದಿನಾಚರಣೆ: ಪ್ರಶಸ್ತಿಗೆ ಅರ್ಜಿ ಆಹ್ವಾನ
|

ವಿಶ್ವ ವಿಕಲಚೇತನರ ದಿನಾಚರಣೆ: ಪ್ರಶಸ್ತಿಗೆ ಅರ್ಜಿ ಆಹ್ವಾನ

ರಾಯಚೂರು.05.ಆಗಸ್ಟ್.25: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಪ್ರತಿ ವರ್ಷದಂತೆ ಈ ವರ್ಷವೂ 2025ರ ಡಿಸೆಂಬರ್ 3ರಂದು ನಡೆಯುವ ವಿಶ್ವ ವಿಕಲಚೇತನರ ದಿನಾಚರಣೆ-2025ರ ಅಂಗವಾಗಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡುತ್ತಿದ್ದು, ಜಿಲ್ಲೆಯ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು, ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಆಜಾದ ನಗರ, ರಾಯಚೂರು ಇವರ ಕಚೇರಿ…

ಯರಮರಸ್ ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿಗೆ ಕೌನ್ಸೆಲಿಂಗ್.
|

ಯರಮರಸ್ ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿಗೆ ಕೌನ್ಸೆಲಿಂಗ್.

ರಾಯಚೂರು.05.ಆಗಸ್ಟ.25: ಇಲ್ಲಿನ ಯರಮರಸ್ ಸರ್ಕಾರಿ ಆದರ್ಶ ವಿದ್ಯಾಲಯ 2025-26ನೇ ಸಾಲಿನ 6ನೇ ತರಗತಿ ದಾಖಲಾತಿ ಕೌನ್ಸೆಲಿಂಗ್ ಪ್ರಕ್ರಿಯು ಆಗಸ್ಟ್ 11ರಿಂದ 14ರವರೆಗೆ ಹಮ್ಮಿಕೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳು ಭಾಗವಹಿಸುವಂತೆ ಕೋರಲಾಗಿದೆ. ಸಾಮಾನ್ಯ ವರ್ಗದ ದಾಖಲಾತಿ ಪ್ರಕ್ರಿಯೆವು ಆಗಸ್ಟ್ 11 ಹಾಗೂ 12 ರಂದು ನಡೆಯಲಿದೆ. ಮೀಸಲಾತಿ ವರ್ಗದ ದಾಖಲಾತಿ ಪ್ರಕ್ರಿಯೆವು ಆಗಸ್ಟ್ 13 ಹಾಗೂ 14ರಂದು ನಿಗದಿಪಡಿಸಲಾಗಿದೆ. ನಿಗದಿತ ದಿನಾಂಕದoದು ಬೆಳಗ್ಗೆ 10 ಗಂಟೆಗೆ ಪೋಷಕರು ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ದಾಖಲಾತಿ ಸಮಯದಲ್ಲಿ ಒದಗಿಸಬೇಕು. ಸಮಯಕ್ಕೆ ಸರಿಯಾದ ದಾಖಲೆಗಳೊಂದಿಗೆ…