ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. ಸಿಎಂ,ಡಿಸಿಎಂ, ಹಾಗೂ ಉನ್ನತ ಶಿಕ್ಷಣ ಸಚಿವರು ವರದಿ ಸ್ವೀಕರಿಸಿದ್ದಾರೆ.
ಬೆಂಗಳೂರು.11.ಆಗಸ್ಟ್.25:- ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕೆ ವರದಿಯ (ಎಸ್‌ಇಪಿ) ಶಿಫಾರಸುಗಳ ಪರಿಶೀಲನೆಗೆ ಉನ್ನತ ಶಿಕ್ಷಣ, ಶಾಲಾ ಶಿಕ್ಷಣ ಸಚಿವರು, ಅಧಿಕಾರಿಗಳು ಹಾಗೂ ಶಿಕ್ಷಣ ತಜ್ಞರನ್ನು ಒಳಗೊಂಡ ಸಮಿತಿ ರಚಿಸಲು ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಬದಲಿಗೆ ಪ್ರತ್ಯೇಕ ರಾಜ್ಯ ಶಿಕ್ಷಣ ನೀತಿ ರಚಿಸಲು ರಾಜ್ಯ ಸರ್ಕಾರ ಪ್ರೊ.ಸುಖದೇವ್ ಥೋರಟ್ ಅಧ್ಯಕ್ಷತೆಯಲ್ಲಿ 2023ರ ನವೆಂಬರ್‌ನಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ರಚಿಸಲಾಗಿತ್ತು. ಆಯೋಗವು 379 ತಜ್ಞರನ್ನು ಒಳಗೊಂಡ 35 ಕಾರ್ಯಪಡೆಗಳನ್ನು ರಚಿಸಿ,…