ಯುವತಿಗೆ ಚುಡಾಯಿಸಿದ ಆರೋಪ, ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು!
|

ಯುವತಿಗೆ ಚುಡಾಯಿಸಿದ ಆರೋಪ, ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು!

ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ  ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು  ಪರಿಶಿಷ್ಟ ಪಂಗಡಕ್ಕೆ ಸೇರಿದ  ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದು, ಒಬ್ಬನ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಹಲ್ಲೆ ಮಾಡಿದ ಲಿಂಗಾಯತ ಸಮಾಜದವರು, ಹಲ್ಲೆಗೊಳಗಾದ ಎಸ್‌ಟಿ ಸಮಾಜದವರು ಪರಸ್ಪರ ದೂರು ದಾಖಲಿಸಿದ್ದಾರೆ.ಯುವತಿಯೊಬ್ಬಳನ್ನ ಚುಡಾಯಿಸಿದ್ದಕ್ಕೆ, ವ್ಯಕ್ತಿಯನ್ನ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ  ಜಿಲ್ಲೆಯಲ್ಲಿ ನಡೆದಿದೆ. ಅಪಹರಿಸಿ ಹಲ್ಲೆ ಮಾಡಿದ ದುಷ್ಕರ್ಮಿಗಳುಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೊಡಚಿ…

ಸಾರಿಗೆ ಇಲಾಖೆಯಲ್ಲಿ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ.ಸಚಿವ ರಾಮಲಿಂಗ ರೆಡ್ಡಿ
|

ಸಾರಿಗೆ ಇಲಾಖೆಯಲ್ಲಿ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ.ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ ರೆಡ್ಡಿ ಮಾಹಿತಿ ತಿಳಿಸಿದ್ದಾರೆ. ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಗಣಿಸಿದಾಗ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು, ಕೋವಿಡ್ ಕಾರಣಕ್ಕೆ ನೇಮಕಾತಿ ವಿಳಂಬವಾಗಿದ್ದು, ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ವಯೋಮಿತಿ ಮೀರಿದೆ. ಆದರೆ ಈ ಪ್ರಕ್ರಿಯೆ ಇನ್ನೂ ಚಾಲ್ತಿಯಲ್ಲಿದ್ದು, ಮಾನವೀಯತೆ ದೃಷ್ಟಿಯಿಂದ ಪರಿಗಣಿಸಲಾಗುವುದು ಎಂದಿದ್ದಾರೆ.

ರಾಜ್ಯ ಸರ್ಕಾರಿ ಕಾಲೇಜು’ಗಳಲ್ಲಿ  ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ.!
|

ರಾಜ್ಯ ಸರ್ಕಾರಿ ಕಾಲೇಜು’ಗಳಲ್ಲಿ  ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ.!

ರಾಜ್ಯದ ಸರ್ಕಾರಿ ಕಾಲೇಜು’ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯನ್ನು ಪದವಿಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲಾಗಿದ್ದು, ಪ್ರಸ್ತಕ ಶೈಕ್ಷಣಿಕ ಸಾಲಿನಲ್ಲಿ ವಿಜ್ಞಾನ ವಿಭಾಗ ಪ್ರಾರಂಭಿಸಲಾಗಿದೆ. ಹುದ್ದೆಗಳು: 1) ಕನ್ನಡ ಉಪನ್ಯಾಸಕರು-01, 2) ಆಂಗ್ಲ ಉಪನ್ಯಾಸಕರು-01, 3) ಭೌತಶಾಸ್ತ್ರ ಉಪನ್ಯಾಸಕರು-01, 4) ರಸಾಯನಶಾಸ್ತ್ರ-01, 5) ಗಣಿತ-01, 6) ಜೀವಶಾಸ್ತ್ರ-01. ಅರ್ಹತೆ : ಅರ್ಹ ಅಭ್ಯರ್ಥಿಗಳು ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿ.ಇಡಿ ಪೂರ್ಣಗೊಳಿಸಿರಬೇಕು….