ಕನಕಗಿರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯುವ ದಿನಾಚರಣೆ
ಕೊಪ್ಪಳ.13.ಆಗಸ್ಟ್.25: ಕನಕಗಿರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಅಂತರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಹೆಚ್.ಐ.ವಿ. ಏಡ್ಸ್ ಜಾಗೃತಿ ಅರಿವಿನ ಮಾಸಾಚರಣೆ-2025ರ ಕಾರ್ಯಕ್ರಮವನ್ನು ಮಂಗಳವಾರ ಆಚರಿಸಲಾಯಿತು. ಕೊಪ್ಪಳ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಎ.ಶಶಿಧರ ಅವರು ಕಾರ್ಯಕ್ರಮ ಕುರಿತು ಮಾತನಾಡಿ, ಆಗಸ್ಟ್ ರಿಂದ ಸೆಪ್ಟಂಬರ್ ವರೆಗೆ ಜಿಲ್ಲೆಯಲ್ಲಿ ಗ್ರಾಮ ಸಭೆ, ಭಿತ್ತಿ ಚಿತ್ರ ಸ್ಪರ್ಧೆ, ಫ್ಲ್ಯಾಶ್‌ಮಾಬ್, ಬೈಕ್ ರ‍್ಯಾಲಿ, ರಸಪ್ರಶ್ನೆ ಕಾರ್ಯಕ್ರಮ, ಜಾನಪದ ಕಲಾ ತಂಡಗಳಿಂದ ಬೀದಿ ನಾಟಕ, ಆರ್.ಆರ್.ಸಿ ಕಾಲೇಜುಗಳ ಮೂಲಕ ದತ್ತು ಗ್ರಾಮ…