2026ರ ತಮಿಳುನಾಡು ವಿಧಾನ ಸಭಾ ಚುನಾವಣೆಯಲ್ಲಿ AIADMK ಜೊತೆ BJP ಮೈತ್ರಿ ಘೋಷಣೆ

ಮಿಳುನಾಡು ಮುಂಬರುವ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಘೋಷನೆ ಮಾಡಿದಾರೆ.

ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಾ, ಎಐಎಡಿಎಂಕೆ, ಬಿಜೆಪಿ ಮತ್ತು ಎಲ್ಲಾ ಮೈತ್ರಿ ಪಕ್ಷಗಳು ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಆಗಿ ಒಟ್ಟಾಗಿ ಸ್ಪರ್ಧಿಸಲಿವೆ ಎಂದು ಎಐಎಡಿಎಂಕೆ ಮತ್ತು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ನಾಯಕತ್ವದಲ್ಲಿ ಎರಡೂ ಪಕ್ಷ ಚುನಾವಣೆಗೆ ಹೋಗಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಶುಕ್ರವಾರ ಚೆನ್ನೈನಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಎರಡೂ ಪಕ್ಷಗಳು ಈ ಹಿಂದೆಯೂ ಮೈತ್ರಿ ಮಾಡಿಕೊಂಡಿದ್ದವು. ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು ಎರಡೂ ಪಕ್ಷಗಳು ಇದೀಗ ಕೈಜೋಡಿಸಿವೆ. “ಅಗತ್ಯವಿದ್ದರೆ ನಾವು ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ರೂಪಿಸುತ್ತೇವೆ” ಎಂದು ಅಮಿತ್ ಶಾ ತಿಳಿಸಿದರು. ಪಳನಿಸ್ವಾಮಿ ಮತ್ತು ರಾಜ್ಯ ಬಿಜೆಪಿ ನಾಯಕ ಕೆ ಅಣ್ಣಾಮಲೈ ಕೂಡ ಜಂಟಿಗೋಷ್ಠಿಯಲ್ಲಿ ಹಾಜರಿದ್ದರು.

1998 ರಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ನೇತೃತ್ವದಲ್ಲಿ ಮೈತ್ರಿ ಮಾಡಿಕೊಂಡಾಗ ಲೋಕಸಭೆಯಲ್ಲಿ ಭಾರಿ ಗೆಲುವಿನ ಬಗ್ಗೆ ಅಮಿತ್ ಶಾ ನೆನಪು ಮಾಡಿಕೊಂಡರು. ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟವು ಒಂದು ಹಂತದಲ್ಲಿ 39 ಲೋಕಸಭಾ ಸ್ಥಾನಗಳಲ್ಲಿ 30 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿ ಕೂಡ ತಮಿಳುನಾಡಿನಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸುಲಭವಾಗಿ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಎಐಎಡಿಎಂಕೆಯ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದ ಅವರು, ಜನರು ಬಿಜೆಪಿ ಕೆಲವು ವಿಷಯಗಳನ್ನು ಸ್ವಂತವಾಗಿ ನಿಭಾಯಿಸಲು ಅವಕಾಶ ನೀಡಬೇಕು ಮತ್ತು ಎಐಎಡಿಎಂಕೆ ಮೇಲೆ ಹೆಚ್ಚಿನ ಹೊರೆ ಹಾಕಬಾರದು ಎಂದು ಮನವಿ ಮಾಡಿದರು.

ಕೆ ಅಣ್ಣಾಮಲೈ ಅವರ ಬದಲಿಗೆ ಪಕ್ಷದ ತಮಿಳುನಾಡು ಮುಖ್ಯಸ್ಥರಾಗಿ ನೈನಾರ್ ನಾಗೇಂತಿರನ್ ಅವರನ್ನು ನಾಮನಿರ್ದೇಶನ ಮಾಡುವುದಾಗಿ ಬಿಜೆಪಿ ಘೋಷಿಸಿದ ನಂತರ ಈ ಘೋಷಣೆ ಹೊರಬಿದ್ದಿದೆ. ಪಕ್ಷಕ್ಕಾಗಿ ಸಾಕಷ್ಟು ಕೊಡುಗೆ ನೀಡಿದ್ದಕ್ಕಾಗಿ ಅಣ್ಣಾಮಲೈ ಅವರಿಗೆ ಅಮಿತ್ ಶಾ ಧನ್ಯವಾದ ತಿಳಿಸಿದರು. ರಾಷ್ಟ್ರ ಮಟ್ಟದಲ್ಲಿ ಅಣ್ಣಾಮಲೈಗೆ ಜವಾಬ್ದಾರಿ ನೀಡುವುದಾಗಿ ಅಮಿತ್ ಶಾ ಸೂಚನೆ ಕೊಟ್ಟರು.

ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಹೋರಾಡುವ ನಿರ್ಧಾರವನ್ನು ಈಗಾಗಲೇ ನಿರ್ಧರಿಸಲಾಗಿರುವುದರಿಂದ, ಅಣ್ಣಾಮಲೈ ಅವರನ್ನು ಬದಲಾಯಿಸುವ ನಿರ್ಧಾರಕ್ಕೂ ಮೈತ್ರಿ ಘೋಷಣೆಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಸ್ಪಷ್ಟನೆ ಕೊಟ್ಟಿದೆ.

prajaprabhat

Recent Posts

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

22 minutes ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

40 minutes ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

1 hour ago

ಇಫ್ಕೋ ನ್ಯಾನೋ ರಸಗೊಬ್ಬರಗಳ ವಿಚಾರ ಸಂಕೀರಣ, ರೈತ-ವಿಜ್ಞಾನಿ ಚರ್ಚಾಗೋಷ್ಠಿ

ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…

3 hours ago

ಆಗಸ್ಟ್ 11ರಂದು ಕೊಪ್ಪಳದಲ್ಲಿ ಯೂರಿಯ ರಸಗೊಬ್ಬರದ ವಿತರಣೆ

ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…

3 hours ago

ಅತಿಥಿ ಉಪನ್ಯಾಸಕರ ನೇಮಕ ಅರ್ಜಿ ಆಹ್ವಾನ

ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…

6 hours ago