ರಾಜ್ಯದಲ್ಲಿ 10,800 ಶಿಕ್ಷಕರ ನೇಮಕ- ಸಚಿವ ಮಧು ಬಂಗಾರಪ್ಪ
ಶಿಮೊಗ್ಗಾ.26.ಜನವರಿ.26: ರಾಜ್ಯಾದ್ಯಂತ ಈಗಾಗಲೇ 14,499 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಶಿಕ್ಷಕರ ಕೊರತೆ ನೀಗಿಸಲು ಪ್ರಥಮ ಬಾರಿಗೆ ನಮ್ಮ ಸರ್ಕಾರ 51000 ಅತಿಥಿ ಶಿಕ್ಷಕರನ್ನುನೇಮಿಸಿದೆ. ಮುಂದಿನ ಶೈಕ್ಷಣಿಕ ವರ್ಷದೊಳಗೆ ಇನ್ನೂ 10,800 ಹೊಸ ಶಿಕ್ಷಕರನ್ನು ಹಾಗೂ ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವ ಸಂದರ್ಭದಲ್ಲಿ ಈ ಶುಭ ಸಂದೇಶ ನೀಡಿದರು….
Any questions related to Day: 26/01/2026?