ಸಂವಿಧಾನ ಓದುವುದು, ಗೌರವಿಸುವುದು ಮತ್ತು ರಕ್ಷಿಸುವುದು ವಿದ್ಯಾರ್ಥಿಗಳ ಕರ್ತವ್ಯವಾಗಬೇಕು – ಆರ್ ಕೆ ಹುಡುಗಿ
ಇಂದಿನ ದುರಿತ ಕಾಲದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ನಮ್ಮ ಆಸರೆಯಾಗಿದೆ ಎಂದು ಚಿಂತಕ ಆರ್.ಕೆ.ಹುಡಗಿ ಅಭಿಪ್ರಾಯಪಟ್ಟರು. ಔರಾದ್.16.ಏಪ್ರಿಲ್.26:ಪಟ್ಟಣದ ಅಮರೇಶ್ವರ್ ಪದವಿ ಮಹಾವಿದ್ಯಾಲಯದಲ್ಲಿ ಜರುಗಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಸಮಾನತೆ, ಸ್ವಾತಂತ್ರ್ಯ, ಬಂಧುತ್ವದೊಂದಿಗೆ ದೇಶದ ಸರ್ವ ಪ್ರಜೆಗಳಿಗೂ ಸಂವಿಧಾನ ನೀಡಿದೆ. ಸಂವಿಧಾನ ಓದುವುದು, ಗೌರವಿಸುವುದು ಮತ್ತು ರಕ್ಷಿಸುವುದು ವಿದ್ಯಾರ್ಥಿಗಳ ಕರ್ತವ್ಯವಾಗಬೇಕು’ ಎಂದು ಹೇಳಿದರು. ಸಾಮಾಜಿಕ ಚಿಂತಕ ನಂದಾದೀಪ ಬೋರಾಳೆ ವಿಶೇಷ ಉಪನ್ಯಾಸ ನೀಡಿದ ಅವರು, ‘ಡಾ….
Any questions related to Day: 16/04/2026?