Day: 01/07/2026

  • |

    ರಾಜ್ಯ ಸರ್ಕಾರ ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಸಹಿ ಸುಧಿ ನೀಡುತ್ತಿದೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ವಸತಿ ಶಾಲೆಗಳು, ಕಾಲೇಜುಗಳು ಹಾಗೂ ಆಡಳಿತ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 3,409 ಹುದ್ದೆಗಳನ್ನು ನೇರ ನೇಮಕಾತಿ ಮತ್ತು ಹಂಗಾಮಿ/ಅತಿಥಿ ಆಧಾರದ ನೇಮಕಾತಿ ಮೂಲಕ ಭರ್ತಿ ಮಾಡಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳು, ಮೋರಾರ್ಜಿ ದೇಸಾಯಿ ವಸತಿ ಶಾಲೆಗಳು, ಡಾ. ಎ.ಪಿ.ಜೆ….

  • |

    ನೂತನ ಬಸ್ ಸಂಚಾರಕ್ಕೆ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರಿಂದ ಚಾಲನೆ

    ಕೊಪ್ಪಳ-ತಳಕಲ್-ಜಿಲ್ಲಾಧಿಕಾರಿಗಳ ಕಛೇರಿ ಮಾರ್ಗದಲ್ಲಿ ನಗರ ಸಾರಿಗೆ ಆರಂಭ ಕೊಪ್ಪಳ.01.ಜುಲೈ 26: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೊಪ್ಪಳ ವಿಭಾಗದ ವತಿಯಿಂದ ಕೊಪ್ಪಳ-ತಳಕಲ್-ಜಿಲ್ಲಾಧಿಕಾರಿಗಳ ಕಛೇರಿ ಮಾರ್ಗದಲ್ಲಿ ಇಂದಿನಿಂದ (ಜುಲೈ 1ರಿಂದ) ನೂತನ ನಗರ ಸಾರಿಗೆ ಆರಂಭಿಸಲಾಗಿದೆ. ಈ ನೂತನ ಬಸ್ ಸಂಚಾರಕ್ಕೆ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಬುಧವಾರ ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು. ಇದೇ ವೇಳೆ ಶಾಸಕರು ಮಾತನಾಡಿ, ಕೊಪ್ಪಳ-ತಳಕಲ್-ಡಿಸಿ ಆಫೀಸ್ ಮಾರ್ಗದಲ್ಲಿ ನೂತನ ನಗರ…

  • |

    ವಿದ್ಯಾರ್ಥಿಗಳ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

    ಕೊಪ್ಪಳ.01.ಜುಲೈ.26: 2026-27ನೇ ಸಾಲಿನ ಮೆಟ್ರಿಕ್ ನಂತರದ (ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ., ಪದವಿ ಮತ್ತು ಸ್ನಾತಕೋತ್ತರ ಪದವಿ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು  https://ssp.karnataka.gov.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಕಳೆದ ಸೆಮಿಸ್ಟರ್/ವಾರ್ಷಿಕ ಪರೀಕ್ಷೆಯಲ್ಲಿ  ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು. ಮೆಟ್ರಿಕ್ ನಂತರದ ಕೋರ್ಸುಗಳ…

  • |

    ಸರ್ಕಾರಿ ಶಾಲೆಗಳಲ್ಲಿ Computer Teachers ನೇಮಕಾತಿಗೆ ಸರ್ಕಾರ ಸಿದ್ಧತೆ

    ಬೆಂಗಳೂರು.30.ಜೂನ್.26: ರಾಜ್ಯ ಸರ್ಕಾರ ಇನ್ಮುಂದೆ ಪ್ರತಿಯೊಂದು ಶಾಲೆಗಳಲ್ಲಿ ಗಣಕ ವಿಜ್ಞಾನ (ಕಂಪ್ಯೂಟರ್ ಸೈನ್ಸ್) ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮಹತ್ವದ ತಬದಲಾವಣೆ ತರಲು ಮುಂದಾಗಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ‘ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2026’ ರ ಕರಡು ಅಧಿಸೂಚನೆಯನ್ನು ಅಧಿಕೃತ ರಾಜ್ಯಪತ್ರದಲ್ಲಿ ಜೂನ್ 29, 2026 ರಂದು ಪ್ರಕಟಿಸಿದೆ. ಈ ಹೊಸ ಬದಲಾವಣೆ ನಿಯಮಗಳ ಅನ್ವಯ, 1 ರಿಂದ 8ನೇ…