22ನೇ ದಿವ್ಯ ಕಲಾ ಮೇಳ ಇಂದು ನವದೆಹಲಿಯ ಇಂಡಿಯಾ ಗೇಟ್‌ನಲ್ಲಿ ಆರಂಭವಾಗಿದೆ!

22ನೇ ದಿವ್ಯ ಕಲಾ ಮೇಳ ಇಂದು ನವದೆಹಲಿಯ ಇಂಡಿಯಾ ಗೇಟ್‌ನಲ್ಲಿ ಆರಂಭವಾಗಿದೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಧೀನದಲ್ಲಿರುವ ವಿಕಲಚೇತನರ ಸಬಲೀಕರಣ ಇಲಾಖೆಯು ವಿಕಲಚೇತನ ಕುಶಲಕರ್ಮಿಗಳು, ಉದ್ಯಮಿಗಳು ಮತ್ತು ಕಲಾವಿದರ ಪ್ರತಿಭೆ, ಸೃಜನಶೀಲತೆ ಮತ್ತು ಉದ್ಯಮಶೀಲತಾ ಮನೋಭಾವವನ್ನು ಪ್ರದರ್ಶಿಸಲು ಮೇಳವನ್ನು ಆಯೋಜಿಸುತ್ತಿದೆ.

ಮೇಳದಲ್ಲಿ 100ಕ್ಕೂ ಹೆಚ್ಚು ಕಲಾವಿದರು ತಮ್ಮ ಪ್ರಾಜೆಕ್ಟ್ ಮತ್ತು ಕೌಶಲ್ಯವನ್ನು ಪ್ರದರ್ಶಿಸುತ್ತಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ.ವೀರೇಂದ್ರ ಕುಮಾರ್ ಮಾತನಾಡಿ, ದಿವ್ಯಾಂಗರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ. ದಿವ್ಯ ಕಲಾ ಮೇಳದ ಉಪಕ್ರಮವು ದಿವ್ಯಾಂಗರಿಗೆ ಅವರ ಆರ್ಥಿಕ ಸಬಲೀಕರಣಕ್ಕಾಗಿ ವಿಶಿಷ್ಟ ವೇದಿಕೆಯನ್ನು ಒದಗಿಸಿದೆ ಎಂದು ಅವರು ತಿಳಿಸಿದರು. ಗಳಿಸುವುದು ಮಾತ್ರವಲ್ಲದೆ ಇತರರಿಗೂ ಉದ್ಯೋಗ ನೀಡುತ್ತಿದ್ದಾರೆ ಎಂದರು.

ಈ ಮೇಳಗಳು ದಿವ್ಯಾಂಗ ಕುಶಲಕರ್ಮಿಗಳು ಮತ್ತು ಉದ್ಯಮಿಗಳಿಗೆ 14 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮಾರಾಟವನ್ನು ಸೃಷ್ಟಿಸಿವೆ ಎಂದು ಶ್ರೀ ಕುಮಾರ್ ಸಂತಸ ವ್ಯಕ್ತಪಡಿಸಿದರು. ದಿವ್ಯಾಂಗರನ್ನು ಸಬಲರನ್ನಾಗಿಸುವ ವಿವಿಧ ಯೋಜನೆಗಳ ಮೂಲಕ ಸರಕಾರವೂ ಸಾಲ ನೀಡುತ್ತಿದೆ ಎಂದು ಸಚಿವರು ಹೇಳಿದರು.

prajaprabhat

Recent Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

4 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

13 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

18 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

18 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

23 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago