25 ಕೋಟಿ ವೆಚ್ಚದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆ ಉದ್ಘಾಟನೆ.!

ಬೀದರ.13.ಫೆಬ್ರುವರಿ.25:-ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೀದರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇವರ ಸಂಯುಕ್ತ ಆಶ್ರಯದಲ್ಲಿ ಬೀದರ ತಾಲ್ಲೂಕಿನ ಅಲಿಯಂಬರ್ ಗ್ರಾಮದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಉದ್ಘಾಟಿಸಿದರು.


ನಂತರ ಮಾತನಾಡಿದ ಸಚಿವರು ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ಸಕಲ ಸೌಲಭ್ಯ ಕೌಶಲ್ಯಗಳನ್ನೊಳಗೊಂಡ ಶಿಕ್ಷಣ ನೀಡಲು ಸರಕಾರವು ಕಿತ್ತೂರರಾಣಿ ಚೆನ್ನಮ್ಮ ವಸತಿ ಶಾಲೆ ನಿರ್ಮಿಸಿದ್ದು ವಿದ್ಯಾರ್ಥಿನಿಯರು ಇದರ ಸದುಪಯೊಗ ಪಡೆದುಕೊಳ್ಳಬೇಕೆಂದರು.

ಇಡೀ ದೇಶ ಸ್ವಾತಂತ್ರ ಸಂಗ್ರಾಮದಲ್ಲಿ ಪ್ರಥಮ ಹೋರಾಟಗಾರ್ತಿಯಾಗಿದ್ದ ರಾಣಿ ಚೆನ್ನಮ್ಮಳ ಕಾರ್ಯ, ಧೈರ್ಯ, ತ್ಯಾಗದ ಬಗ್ಗೆ ಹೆಣ್ಣು ಮಕ್ಕಳು ತಿಳಿದುಕೊಂಡಿರಬೇಕು. ರಾಣಿ ಚೆನ್ನಮ್ಮಳಂತೆ ಧೈರ್ಯಶಾಲಿಗಳಾಗಿ ಉನ್ನತ ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವಂತೆ ಸಚಿವರು ಕರೆ ನೀಡಿದರು.


ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್, ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ಇಫ್ಕೋ ನ್ಯಾನೋ ರಸಗೊಬ್ಬರಗಳ ವಿಚಾರ ಸಂಕೀರಣ, ರೈತ-ವಿಜ್ಞಾನಿ ಚರ್ಚಾಗೋಷ್ಠಿ

ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…

2 hours ago

ಆಗಸ್ಟ್ 11ರಂದು ಕೊಪ್ಪಳದಲ್ಲಿ ಯೂರಿಯ ರಸಗೊಬ್ಬರದ ವಿತರಣೆ

ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…

2 hours ago

ಅತಿಥಿ ಉಪನ್ಯಾಸಕರ ನೇಮಕ ಅರ್ಜಿ ಆಹ್ವಾನ

ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…

5 hours ago

ಆಧುನಿಕ ಕುರಿ ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…

9 hours ago

ರಾಷ್ಟ್ರೀಯ ಲೋಕ ಆದಾಲತ್‌ನ ಪೂರ್ವಭಾವಿ ಸಭೆ ಅಗಸ್ಟ್.7ರಿಂದ

ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…

9 hours ago

ತೋಟಗಾರಿಕೆ ದಿನಾಚರಣೆಗೆ ಸಿಇಓ ಡಾ.ಗಿರೀಶ ಬದೋಲೆ ಚಾಲನೆ

ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…

9 hours ago