ಬೀದರ್.14.ಫೆ.25:- ಬೀದರ ಜಿಲ್ಲೆಯ ಲಾಲ್ ಬಾಗ್‌ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 250 ಅಡಿ ಎತ್ತರದ ಪ್ರತಿಮೆ ಸ್ಥಾಪಿಸಬೇಕು’ ಎಂದು ಕರ್ನಾಟಕ ಭೀಮ ಸೇನೆ ರಾಜ್ಯ ಕಾರ್ಯದರ್ಶಿ ವಿಷ್ಣುವರ್ಧನ್ ವಾಲ್ದೊಡ್ಡಿ ಆಗ್ರಹಿಸಿದರು.
ನೆರೆಯ ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ಅಂಬೇಡ್ಕರ್ ಅವರ ಭವ್ಯ ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ.
ನಮ್ಮ ರಾಜ್ಯದಲ್ಲೂ ಸ್ಥಾಪಿಸಿ, ಯುವ ಜನಾಂಗಕ್ಕೆ ಪ್ರೇರಣೆ ಆಗುವಂತಹ ಕೆಲಸ ರಾಜ್ಯ ಸರ್ಕಾರ ಮಾಡಬೇಕು ಎಂದು ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
2023ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಹಾಗೂ 2024ರಲ್ಲಿ ಜರುಗಿದ ಲೋಕಸಭೆ ಚುನಾವಣೆಯಲ್ಲಿ ಎಲ್ಲ ದಲಿತ ಪರ ಸಂಘಟನೆಗಳು ಹಾಗೂ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ದೊಡ್ಡ ಮಟ್ಟದಲ್ಲಿ ಬೆಂಬಲಿಸಿದೆ.
ಇದರಿಂದ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯ ಗಳಿಸಿದ್ದಾರೆ. ದಲಿತರ ಅಸ್ಮಿತೆಯ ಪ್ರತೀಕವಾಗಿರುವ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿ ಋಣ ತೀರಿಸಬೇಕೆಂದು ಆಗ್ರಹಿಸಿದರು.
ಲಾಲ ಬಾಗ್‌ನಲ್ಲಿ ಅಂಬೇಡ್ಕರ್ ಪ್ರತಿಮೆಯೊಂದಿಗೆ ಡಿಜಿಟಲ್ ಗ್ರಂಥಾಲಯ ಸ್ಥಾಪಿಸಬೇಕು. ಅಂಬೇಡ್ಕರ್ ಅವರ ವಿಚಾರಗಳ ಪರಿಚಯ, ಸಂವಿಧಾನದ ಮಹತ್ವ ಸಾರುವ ಕೆಲಸ ಮಾಡಬೇಕೆಂದು ಒತ್ತಾಯಿಸಿದರು.
ಯುವ ಮುಖಂಡ ಗೌತಮ ಪ್ರಸಾದ ಮಾತನಾಡಿ, ಬರುವ ಬಜೆಟ್‌ನಲ್ಲಿ 250 ಅಡಿ ಪ್ರತಿಮೆ ಸ್ಥಾಪನೆಗೆ ಅನುದಾನ ಮೀಸಲಿಡಬೇಕು. 2026ರ ಒಳಗೆ ಅದನ್ನು ಉದ್ಘಾಟಿಸಬೇಕು ಎಂದು ಹೇಳಿದರು.
ಕರ್ನಾಟಕ ಭೀಮಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರ್ಷಿತ ದಾಂಡೇಕರ್ ಮಾತನಾಡಿ, ಪ್ರತಿಮೆ ಸ್ಥಾಪಿಸುವ ವಿಚಾರವಾಗಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.
ಸೇನೆಯ ಪ್ರಮುಖರಾದ ಶಿವಾನಂದ ಉಪ್ಪೆ, ಅಕ್ಷಯ ವರ್ಧನ, ವಿಜಯಕುಮಾರ ಬಾವಿಕಟ್ಟಿ, ಸುರೇಶ ಜೋಜನಾಕರ್, ರವಿ ಮೋರೆ ಹಾಜರಿದ್ದರು.
ಕರ್ನಾಟಕ ಭೀಮಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರ್ಷಿತ ದಾಂಡೇಕರ್ ಅವರು 250 ಪ್ರತಿಮೆ ಸ್ಥಾಪಿಸುವ ವಿಚಾರವಾಗಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.ಸೇನೆಯ ಪ್ರಮುಖರಾದ ಶಿವಾನಂದ ಉಪ್ಪೆ, ಅಕ್ಷಯ ವರ್ಧನ, ವಿಜಯಕುಮಾರ ಬಾವಿಕಟ್ಟಿ, ಸುರೇಶ ಜೋಜನಾಕರ್, ರವಿ ಮೋರೆ ಹಾಜರಿದ್ದರು.
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…