ಡಿ.21:- ಇಂದು ರೈತ ಜಿಲ್ಲೆ ಎಲ್ಲಾ ರೈತ ಬಾಂಧವರಿಗೆ ಸಹಿ ಸುದ್ಧಿ ಕರ್ಣಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಲಾಭ ಪಡೆದುಕೊಳ್ಳುವಂತೆ ಎಲ್ಲಾ ರೈತ ಸಮುದಾಯಕೆ ಸಹಿ ಸುಧಿ
2024-25ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆ ವಿಮಾ ಯೋಜನೆ ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಯೋಜನೆಯಡಿ ಬೆಳೆ ನಷ್ಟ ಪರಿಸ್ಥಿತಿಯಲ್ಲಿ ರೈತರು ಅನುಕೂಲ ಪಡೆಯಬಹುದಾಗಿದೆ.
ಈ ಯೋಜನೆಯ ಗ್ರಾಮ ಪಂಚಾಯಿತಿ ಮಟ್ಟಕ್ಕೆ ಒಳಪಡುವÀ ಬೆಳೆಗಳಾದ ಕಡಲೆ (ಮಳೆಯಾಶ್ರಿತ), ಕಡಲೆ (ನೀರಾವರಿ) ,ಜೋಳ (ನೀರಾವರಿ) ಹಾಗೂ ಗೋಧಿ (ನೀರಾವರಿ) ಬೆಳೆಗಳಿಗೆ ಡಿಸೆಂಬರ್.31 ಕೊನೆಯ ದಿನಾಂಕವಾಗಿರುತ್ತದೆ. ಸದರಿ ಯೋಜನೆಯಲ್ಲಿ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರೂ ಸಹ ಪಾಲ್ಗೊಳ್ಳಬಹುದಾಗಿದೆ.
ಜಿಲ್ಲೆಯಲ್ಲಿ “ಯೂನಿವರ್ಸಲ್ ಸೋಂಪೊ ಜನರಲ್ ಇನ್‍ಶ್ಯೂರೆನ್ಸ್ ಕಂಪನಿ ಲಿಮಿಟೆಡ್, ಬೆಂಗಳೂರು” ಅನುಷ್ಠಾನ ವಿಮಾ ಸಂಸ್ಥೆಯಾಗಿದೆ.
ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಫ್ರೂಟ್ಸ್ ಐಡಿ/ಪಹಣಿ/ಖಾತೆ/ಪಾಸ ಪುಸ್ತಕ/ಕಂದಾಯ ರಶೀದಿಯನ್ನು, ಆಧಾರ್ ಸಂಖ್ಯೆ/ಆಧಾರ್ ನೋಂದಣಿ ಸಂಖ್ಯೆ ಹಾಗು ಮೊಬೈಲ್ ಸಂಖ್ಯೆಯನ್ನು ನೀಡತಕ್ಕದ್ದು.
ಹೆಚ್ಚಿನ ವಿವರಗಳಿಗೆ ಸ್ಥಳೀಯ ವಾಣಿಜ್ಯ/ಗ್ರಾಮೀಣ/ಸಹಕಾರಿ ಬ್ಯಾಂಕುಗಳನ್ನು/ಕಾಮನ್ ಸರ್ವಿಸ್ ಸೆಂಟರ್/ಗ್ರಾಮ ಒನ್ ಅಥವಾ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳಿಗೆ ಸಂಪರ್ಕಿಸಬಹುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲಾ ರೈತ ಬಾಂಧವರಿಗೆ ಸೂಚಿತ್ಸುವೆ ನೀವು ನಿಮ್ಮ ಸಮೀಪದಲ್ಲಿರುವ ರೈತ ಸಂಪರ್ಕ ಕೇಂದ್ರ ಅಥವಾ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳಿಗೆ ಸಂಪರ್ಕಿಸಬಹುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Source: www.prajaprabhat.com
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…