2025-26 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮುರು ವರ್ಷಗಳ ಡಿಪ್ಲೋಮಾ DHTT (ಡಿ.ಹೆಚ್.ಟಿ.ಟಿ) ಕೋರ್ಸ್‍ಗಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನ:
ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ದಿನಾಂಕ: 01-07-2025 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು.
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢಿಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.
ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿಯಲ್ಲಿ 22, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) ನಲ್ಲಿ 12, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ) ಯಲ್ಲಿ 03 ಹಾಗೂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) ನಲ್ಲಿ 02 ಸೀಟುಗಳು ಸೇರಿದಂತೆ ಒಟ್ಟು 39 ಸೀಟುಗಳು ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸೆಲಿಂಗ್‍ಗಾಗಿ ಕರೆಯಲಾಗುವುದು.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಪ್ರಾಂಶುಪಾಲರು,
ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102
ಹೆಚ್ಚಿನ ಮಾಹಿತಿಗಾಗಿ:
ದೂರವಾಣಿ ಸಂ:
ಕಾರ್ಯಾಲಯ ಸಂಖ್ಯೆ.08372-259664, ಮೊಬೈಲ್ ಸಂಖ್ಯೆ: 9449162822 ಅಥವಾ
ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಇವರುಗಳನ್ನು ಸಂಪರ್ಕಿಸಬಹುದು.
Website Link:-
https://khtigadag.ac.in/
ಅರ್ಜಿಗಳನ್ನು https://khtigadag.ac.in/AdmissionForm.pdf ಮೂಲಕ ಆನ್‍ಲೈನ್‍ನಲ್ಲಿ ಡೌನ್‍ಲೋಡ್ ಮಾಡಿಕೊಂಡು, ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102 ಇವರಿಗೆ ಜೂನ್ 15 ರೊಳಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…