ಬೆಂಗಳೂರು .28.ಮೇ.25:- ರಾಜ್ಯದಲ್ಲಿ 3000 ಲೈನ್ ಮೆನ್ ಗಳ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ರಾಮನಗರ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಲೈನ್ ಮೆನ್ ಗಳ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ದೈಹಿಕ ತರಬೇತಿ ನಡೆಯುತ್ತಿದೆ.
ಜೂನ್ ಅಂತ್ಯದೊಳಗೆ ಎಲ್ಲರಿಗೂ ಸ್ಥಳ ನಿಯುಕ್ತಿ ಮಾಡಿ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಸ್ವಾಧೀನಾನುಭವ ಪತ್ರ ಇಲ್ಲದ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಬಾರದು ಎನ್ನುವ ನಿಯಮದಿಂದ ಸಮಸ್ಯೆಯಾಗುತ್ತಿದೆ. ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇಂಧನ ಇಲಾಖೆ ಈ ನೀತಿ ಜಾರಿಗೆ ತಂದಿದೆ. ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನದಲ್ಲಿದ್ದು, ಸಂಪುಟ ಸಭೆಯಲ್ಲಿ ಚರ್ಚಿಸಿ ಪರಿಹಾರ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಅಕ್ರಮ ಕೃಷಿ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ನವೀಕೃತ ಶೀಘ್ರ ಸಂಪರ್ಕ ಯೋಜನೆ ಜಾರಿಗೆ ತಂದಿದ್ದು, ರೈತರು ಸ್ವಯಂ ಮೂಲಸೌಕರ್ಯ ಕಲ್ಪಿಸಿಕೊಂಡಲ್ಲಿ ಎಸ್ಕಾಂ ವತಿಯಿಂದ ಟ್ರಾನ್ಸ್ ಫಾರ್ಮರ್ ಒದಗಿಸಿ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…