ಬೆಂಗಳೂರು.29.ಏಪ್ರಿಲ್.25:- ರಾಜ್ಯದ 100 ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಆಸಕ್ತಿ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ ತರಬೇತಿ ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ ಆರಂಭಿಸಲಾಗುತ್ತಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
’29 ಜಿಲ್ಲೆಗಳಿಂದ ತಲಾ ಮೂರು ಗ್ರಾಮ ಪಂಚಾಯಿತಿಗಳಂತೆ ಒಟ್ಟು 87, ಬೆಳಗಾವಿ ಜಿಲ್ಲೆಯಲ್ಲಿ 7 ಮತ್ತು ತುಮಕೂರು ಜಿಲ್ಲೆಯ 6 ಗ್ರಾಮ ಪಂಚಾಯಿತಿ ಸೇರಿ ಒಟ್ಟು 100 ಗ್ರಾಮ ಪಂಚಾಯಿತಿಗಳಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.
ಪ್ರತಿ ಕೇಂದ್ರದಲ್ಲಿ ಸ್ವ-ಉದ್ಯೋಗ ಕೈಗೊಳ್ಳುವ ಮಹಿಳೆಯರಿಗೆ ಕೌಶಲ ಅಭಿವೃದ್ಧಿ ನಿಗಮ ಹಾಗೂ ಸರ್ಕಾರೇತರ ಸಂಸ್ಥೆಗಳ ಮೂಲಕ ತರಬೇತಿ ನೀಡಿ, ಬ್ಯಾಂಕುಗಳೊಂದಿಗೆ ಸಂಪರ್ಕ ಏರ್ಪಡಿಸಿ 30 ಸಾವಿರ ಮಹಿಳೆಯರಿಗೆ ಸ್ವ-ಉದ್ಯೋಗ ಆರಂಭಿಸುವಂತೆ ಪ್ರೇರೇಪಿಸಲಾಗುವುದು.
ಪ್ರತಿ ತರಬೇತಿ ಕೇಂದ್ರದಿಂದ 300 ಮಹಿಳೆಯರಿಗೆ ಕೌಶಲ ತರಬೇತಿ ನೀಡುವ ಗುರಿ ಹೊಂದಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.
‘ಗ್ರಾಮೀಣ ಪ್ರದೇಶಗಳ ಮಹಿಳೆಯರು ಕೃಷಿಯಿಂದ ಹೆಚ್ಚಿನ ಲಾಭ ಪಡೆಯಲು ಸಾಧ್ಯವಾಗದೆ ಆದಾಯ ಗಳಿಕೆಗಾಗಿ ಪರ್ಯಾಯ ವ್ಯವಸ್ಥೆ ಹುಡುಕುತ್ತಿದ್ದಾರೆ. ಆದರೆ, ಉದ್ಯೋಗ ಒದಗಿಸಬಲ್ಲ ತರಬೇತಿ ಕೇಂದ್ರಗಳ ಕೊರತೆ ಇದೆ. ಹೀಗಾಗಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉದ್ಯೋಗಾಧಾರಿತ ಕೌಶಲ ತರಬೇತಿ ಕೇಂದ್ರಗಳನ್ನು ಆರಂಭಿಸುವ ಉದ್ದೇಶದಿಂದ ಬಜೆಟ್ ಘೋಷಣೆಯಂತೆ ಈ ಯೋಜನೆ ಆರಂಭಿಸಲಾಗುತ್ತಿದೆ’ ಎಂದು ಪ್ರಿಯಾಂಕ್ ತಿಳಿಸಿದ್ದಾರೆ.
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…