ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿ ಶಿವಕುಮಾರ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಸಚಿವ ರಹಿಮ ಖಾನ.!

ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಜಿ ಅವರು ಜನವರಿ 16ರಂದು ಬೀದರ್‌ನಲ್ಲಿ ಎಸ್‌ಬಿಐ ಬ್ಯಾಂಕ್ ಎಟಿಎಂಗಳಿಗೆ ಸಾಗಿಸುತ್ತಿದ್ದ ಹಣ ದೋಚಿ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡು ಹೈದರಾಬಾದ್‌ನ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿ ಶಿವಕುಮಾರ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಗುರುವಾರ ಬೆಳಗ್ಗೆ ಸುಮಾರು 10:00 ಗಂಟೆಗೆ ಬೆಂಗಳೂರಿನಿಂದ ಹೈದರಾಬಾದ್‌ಗೆ ಆಗಮಿಸಿದ ಅವರು ಶಿವಕುಮಾರ ಅವರ ಕುಟುಂಬ ಸದಸ್ಯರನ್ನು ಮತ್ತು ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಅವರನ್ನು ಭೇಟಿ ಮಾಡಿ ಧೈರ್ಯ ತುಂಬಿದರು ಮತ್ತು ಆರ್ಥಿಕ ಸಹಾಯವನ್ನು ಸಚಿವ ರಹೀಮ್ ಖಾನ್ ಮಾಡಿದರು. 

ಶಿವಕುಮಾರ್ ಈಗ ಅಪಾಯದಿಂದ ಪಾರಾಗಿದ್ದು, ಚಿಕಿತ್ಸಾ ವೆಚ್ಚದ ಬಗ್ಗೆ ಚಿಂತಿಸಬೇಡಿ ಎಂದು ಭರವಸೆ ನೀಡಿದ ಸಚಿವರು, ಶಿವಕುಮಾರ್ ಅವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಲ್ಲಿ ವಿನಂತಿಸಿದರಲ್ಲದೆ ಅವರ ಆರೋಗ್ಯದ ಬಗ್ಗೆ ವಿವರವಾಗಿ ವಿಚಾರಿಸಿದರು.

ಗಾಯಾಳು ಶಿವಕುಮಾರ್ ಶೀಘ್ರ ಗುಣಮುಖರಾಗುವ ಭರವಸೆಯನ್ನು ವೈದ್ಯರು ನೀಡಿದ್ದಾರೆ. ದುರಂತಕ್ಕೆ ಕಾರಣರಾದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕುಟುಂಬ ಸದಸ್ಯರಿಗೆ ಭರವಸೆ ನೀಡಿದರು.  

ಗಾಯಗೊಂಡವರು ಮತ್ತು ಮೃತರ ಕುಟುಂಬಗಳಿಗೆ ಸಕಾಲದಲ್ಲಿ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದೂ ಸಚಿವ ರಹೀಮ್ ಖಾನ್ ತಿಳಿಸಿದರು.

prajaprabhat

Recent Posts

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

5 minutes ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

8 minutes ago

ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

14 minutes ago

5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.

ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…

55 minutes ago

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

1 hour ago

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

6 hours ago